ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2020
ಶಿವಮೊಗ್ಗ ಜಿಲ್ಲೆಯಾದ್ಯಂತೆ ಮಳೆ ಜೋರಾಗಿದೆ. ತೀರ್ಥಹಳ್ಳಿ ಭಾಗದಲ್ಲಿ ಬಿಟ್ಟೂ ಬಿಡದಂತೆ ಮಳೆ ಸುರಿಯುತ್ತಿದೆ. ಇದರಿಂದ ತುಂಗಾ ನದಿಯಲ್ಲಿ ದೊಡ್ಡ ಪ್ರಮಾಣದಲ್ಲಿ ನೀರು ಹರಿಯುತ್ತಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮುಳುಗಿದ ಮಂಟಪ
ತುಂಗಾ ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರು ಹೊರ ಬಿಡುತ್ತಿರುವುದರಿಂದ, ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ ಸಂಪೂರ್ಣ ಮುಳುಗಿದೆ. ಇದನ್ನು ಕಣ್ತುಂಬಿಕೊಳ್ಳಲು ಬೆಳಗ್ಗೆಯಿಂದಲೇ ಜನರು ಮಂಟಪದ ಬಳಿಗೆ ಬರುತ್ತಿದ್ದಾರೆ. ತುಂಗೆಗೆ ಪೂಜೆ ಸಲ್ಲಿಸಿ, ನಾಡನ್ನು ಸುಭಿಕ್ಷವಾಗಿ ಇಡುವಂತೆ ಬೇಡಿಕೊಳ್ಳುತ್ತಿದ್ದಾರೆ.
ಹೊರ ಹರಿವು ಎಷ್ಟಿದೆ?
ಮೂರು ಟಿಎಂಸಿ ಸಾಮರ್ಥ್ಯದ ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಹಾಗಾಗಿ ಜಲಾಶಯದಿಂದ ಕೆಲವು ದಿನದಿಂದ ಒಳಹರಿವಿಗೆ ತಕ್ಕಂತೆ ಹೊರ ಹರಿವು ಇದೆ. ಇವತ್ತು ತುಂಗಾ ಜಲಾಶಯಕ್ಕೆ 43,385 ಕ್ಯೂಸೆಕ್ ನೀರು ಒಳಹರಿವು ಇದೆ. 43,385 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಇದರಿಂದ ತುಂಗೆ ಮೈದುಂಬಿ ಹರಿಯುತ್ತಿದ್ದಾಳೆ.
VIDEO REPORT
https://www.facebook.com/liveshivamogga/videos/292611411972608/?t=18
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]