ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 25 ಆಗಸ್ಟ್ 2020
ಪಟ್ಟಣದ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬನಿಗೆ ಬೂಟ್ ಕಾಲಿನಲ್ಲಿ ಒದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಪೊಲೀಸ್ ಕಾನ್ಸ್ಟೇಬಲ್ನನ್ನು ಅಮಾನತು ಮಾಡಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈತ ಕಾನ್ಸ್ಟೇಬಲ್ ಆಗಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಪೂರ್ಣೇಶ್, ಅಮಾನತಾದ ಕಾನ್ಸ್ಟೇಬಲ್. ತೀರ್ಥಹಳ್ಳಿಯ ಬಸ್ ನಿಲ್ದಾಣದಲ್ಲಿ ಮಲಗಿದ್ದ ವ್ಯಕ್ತಿಗೆ ಪಾನಮತ್ತನಾಗಿದ್ದ ಪೂರ್ಣೇಶ್ ಬೂಟ್ ಕಾಲಿನಲ್ಲಿ ಒದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಸ್ಥಳೀಯರು ಇದನ್ನು ಮೊಬೈಲ್ಗಳಲ್ಲಿ ರೆಕಾರ್ಡ್ ಮಾಡಿದ್ದರು.
ಈ ವಿಡಿಯೋ ವೈರಲ್ ಆಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಪೂರ್ಣೇಶ್ ನಡೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಹಾಗಾಗಿ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ಪೂರ್ಣೇಶ್ನನ್ನು ಅಮಾನತು ಮಾಡಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]