ಕೆಲವೇ ಸಮಯದಲ್ಲಿ ರೈಲ್ವೆ ಮುಖ್ಯ ಕೇಂದ್ರವಾಗುತ್ತೆ ಶಿವಮೊಗ್ಗ, ನಾಲ್ಕು ಕಡೆ ಮೇಲ್ಸೇತುವೆ ನಿರ್ಮಾಣ, ಎಲ್ಲೆಲ್ಲಿ? ಎಷ್ಟು ವೆಚ್ಚದಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

JOB JUNCTION 1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಆಗಸ್ಟ್ 2020

ಇನ್ನು ಕೆಲವೆ ದಿನದಲ್ಲಿ ಶಿವಮೊಗ್ಗ ಜಿಲ್ಲೆಯು ರೈಲ್ವೆ ಮುಖ್ಯ ಕೇಂದ್ರಗಳಲ್ಲಿ ಒಂದಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಘವೇಂದ್ರ, ಜಿಲ್ಲೆಯ ರೈಲ್ವೆ ಯೋಜನೆಗಳ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು.

ಕೋಚಿಂಗ್ ಟರ್ಮಿನಲ್ ಸ್ಥಾಪನೆ

ಮೂರು ಸಾವಿರ ಕಿ.ಮೀ ಸಂಚರಿಸಿದ ಬಳಿಕ ರೈಲುಗಳ ಸರ್ವಿಸ್ ಮಾಡಿಸಬೇಕಿದೆ. 78 ಕೋಟಿ ವೆಚ್ಚದಲ್ಲಿ ಶಿವಮೊಗ್ಗದಲ್ಲಿ ಕೋಚಿಂಗ್ ಟರ್ಮಿನಲ್ ಮತ್ತು ಸರ್ವಿಸ್ ಸ್ಟೇಷನ್ ಆರಂಭಿಸಲಾಗುತ್ತಿದೆ.

118356958 1199770007051084 2480095115046319375 o.jpg? nc cat=104& nc sid=8024bb& nc ohc=URspqCGr7GkAX Ucrae& nc ht=scontent.fblr11 1

ಶಿವಮೊಗ್ಗ ಶಿಕಾರಿಪುರ ರಾಣೆಬೆನ್ನೂರು ರೈಲ್ವೆ ಯೋಜನೆಯ ಕಾರ್ಯವು ಪ್ರಗತಿಯಲ್ಲಿದೆ. ಶಿವಮೊಗ್ಗದಿಂದ ಶಿಕಾರಿಪುರದವರೆಗಿನ ಯೋಜನೆಯನ್ನು ಫೇಸ್‍ 1 ಎಂದು ಗುರುತಿಸಲಾಗಿದೆ. ಈ ವ್ಯಾಪ್ತಿಯಲ್ಲಿ 27 ಗ್ರಾಮಗಳು ಬರಲಿವೆ. ಈ ಪೈಕಿ 14 ಹಳ್ಳಿಯಲ್ಲಿ ಜಾಯಿಂಟ್ ಮೆಷರ್‍ಮೆಂಟ್ ಆಗಿದೆ. 8 ಗ್ರಾಮಗಳಲ್ಲಿ ಫೈನಲ್ ನೋಟಿಫಿಕೇಷನ್ ಆಗಿದೆ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪರಿಹಾರ ವಿತರಿಸಿ ಭೂಮಿ ವಶಕ್ಕೆ ಪಡೆಯಲಾಗುತ್ತದೆ ಎಂದರು.

ಮೂರು ರೈಲ್ವೆ ಮೇಲ್ಸೇತುವೆ ನಿರ್ಮಾಣ

ಮೇಲ್ಸೇತುವೆ 1

ರೈಲ್ವೆ ಟ್ರಾಫಿಕ್ ಹೆಚ್ಚಾಗುವ ಹಿನ್ನೆಲೆ ನಾಲ್ಕು ಕಡೆಯಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಿಸಲಾಗುತ್ತದೆ. ಶಿವಮೊಗ್ಗದ ಉಷಾ ನರ್ಸಿಂಗ್ ಹೋಂ ಬಳಿ ಸವಳಂಗ ರಸ್ತೆಯಲ್ಲಿ 631 ಮೀಟರ್ ಉದ್ದದ ಮೇಲ್ಸೇತುವೆ ನಿರ್ಮಿಸಲಾಗುತ್ತದೆ. 60.76 ಕೋಟಿ ವೆಚ್ಚದಲ್ಲಿ ಈ ಕಾಮಗಾರಿ ನಡೆಯಲಿದೆ ಎಂದರು.

ಮೇಲ್ಸೇತುವೆ 2

ಕಡದಕಟ್ಟೆ ಬಳಿ 564 ಮೀಟರ್‍ ಉದ್ದದ ಮೇಲ್ಸೇತುವೆಯನ್ನು 25.92 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತದೆ.

ಮೇಲ್ಸೇತುವೆ 3

ಶಿವಮೊಗ್ಗದ ಕಾಶಿಪುರದಲ್ಲಿ 493 ಮೀಟರ್ ಉದ್ದದ ಮೇಲ್ಸೇತುವೆಯನ್ನು 29.63 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ.

ಮೇಲ್ಸೇತುವೆ 4

ರಾಷ್ಟ್ರೀಯ ಹೆದ್ದಾರಿ ಇಲಾಖೆ ವತಿಯಿಂದ ಶಿವಮೊಗ್ಗ ವಿದ್ಯಾನಗರ ರೈಲ್ವೆ ನಿಲ್ದಾಣದ ಬಳಿ 920 ಮೀಟರ್‍ ರೈಲ್ವೆ ಮೇಲ್ಸೇತುವೆಯನ್ನು 43.897 ಕೋಟಿ ವಚ್ಚದಲ್ಲಿ ನಿರ್ಮಿಸಲಾಗುತ್ತದೆ. ಕಳೆದ ವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಯೋಜನೆಗಳಿಗೆ ಅನುಮೋದನೆ ದೊರಕಿದೆ ಎಂದು ರಾಘವೇಂದ್ರ ತಿಳಿಸಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 26, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment