ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ 40 ಸೀಟ್ಗಿಂತಲೂ ಹೆಚ್ಚು ಗೆಲ್ಲಲಿ ನೋಡೋಣ, ಕಾಂಗ್ರೆಸ್ ಸವಾಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

JOB JUNCTION 1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಆಗಸ್ಟ್ 2020

ಕಾಂಗ್ರೆಸ್‌ನಲ್ಲಿ ನಾಯಕತ್ವ ಇಲ್ಲ. ಅದು ಮುಳುಗುವ ಹಡಗು ಆಗಿದೆ ಅಂತಾ ಸಚಿವ ಕೆ.ಎಸ್.ಈಶ್ವರಪ್ಪ ನೀಡಿದ್ದ ಹೇಳಿಕೆಗೆ ಜಿಲ್ಲಾ ಕಾಂಗ್ರೆಸ್ ತಿರುಗೇಟು ನೀಡಿದೆ. ಯಡಿಯೂರಪ್ಪ ಅವರು ಕೆಜೆಪಿಯಿಂದ ಬಿಜೆಪಿಗೆ ಬಾರದೆ ಹೋಗಿದ್ದರೆ ಬಿಜೆಪಿಯಲ್ಲಿ ನಾಯಕತ್ವ ಇರುತ್ತಿತ್ತಾ ಅಂತಾ ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್, ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ 40ಕ್ಕಿಂತಲೂ ಹೆಚ್ಚು ಸೀಟ್‍ ಗಳಿಸಲಿ ಎಂದು ಸವಾಲು ಹಾಕಿದರು.

ದೇಶದಲ್ಲಿ 60-70 ವರ್ಷ ಕಾಂಗ್ರೆಸ್ ಪಕ್ಷ ಆಡಳಿತ ನಡೆಸಿದೆ. ನಾಯಕತ್ವ ಇಲ್ಲ ಈಶ್ವರಪ್ಪ ಅವರು ಬಾಲಿಷ ಹೇಳಿಕೆ ನೀಡಿದ್ದಾರೆ. ಬೇಕಾದ ಕೆಲಸ ಬಿಟ್ಟು, ಬೇಡದೆ ಇರುವ ಮಾತನಾಡುತ್ತಿದ್ದಾರೆ. ಇವತ್ತಿನ ಸಂದರ್ಭದಲ್ಲೂ ಬರೀ ರಾಜಕೀಯ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕ್ಷೇತ್ರಗಳಿಗೆ ಸರ್ಕಾರದಿಂದ ನಿಗದಿ ಪಡಿಸಿದ ಮೀಸಲಾತಿ ಪಟ್ಟಿ ನಿಯಮ ಬಾಹಿರವಾಗಿದ್ದು, ಮೀಸಲಾತಿ ನಿಗದಿ ಪಡಿಸುವ ಪ್ರಕ್ರಿಯೆ ವೇಳೆ ರೋಸ್ಟರ್ ನಿಯಮವನ್ನು ಉಲ್ಲಂಘಿಸಲಾಗಿದೆ ಎಂದು ಸುಂದರೇಶ್ ಆರೋಪಿಸಿದರು.

ರಾಜೀವ್‌ಗಾಂಧಿ ಪ್ರಧಾನ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಲ್ಲ ಜಾತಿ, ಜನಾಂಗಕ್ಕೆ ನ್ಯಾಯ ಒದಗಿಸಲು ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿಗೆ ತಂದಿದ್ದರು. ಈ ವ್ಯವಸ್ಥೆಯನ್ನು ಬಿಜೆಪಿ ಸರ್ಕಾರ ಹಾಳು ಮಾಡುತ್ತಿದೆ. ಈಗ ಪ್ರಕಟಿಸಿರುವ ಮೀಸಲಾತಿ ಪಟ್ಟಿ ವಿರುದ್ದ ಕಾಂಗ್ರೆಸ್ ಪಕ್ಷದ ನಾಯಕರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಕೂಡಲೇ ಸರ್ಕಾರ ಈಗ ಪ್ರಕಟಿಸಿರುವ ಮೀಸಲಾತಿ ಪಟ್ಟಿಯನ್ನು ಪುನರ್ ಪರಿಶೀಲಿಸಿ ನೂತನ ಪಟ್ಟಿ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿ.ಪಂ. ಸದಸ್ಯ ಕಲಗೋಡು ರತ್ನಾಕರ್, ಮುಖಂಡರಾದ ಡಾ.ಶ್ರೀನಿವಾಸ್, ಸಿ.ಎಸ್. ಚಂದ್ರಭೂಪಾಲ್, ಚಂದನ್, ಚಂದ್ರಶೇಖರ್, ಬಾಬು, ಪ್ರಭಾಕರ ಗೌಡ ಇನ್ನಿತರರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 27, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment