ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 28 ಆಗಸ್ಟ್ 2020
ತಾವರೆಘಟ್ಟದ ಸ್ಮಶಾನ ಜಾಗದಲ್ಲಿ ಆಗಿದ್ದ ಒತ್ತುವರಿಯನ್ನು ತಾಲೂಕು ಆಡಳಿತ ಕೊನೆಗೂ ತೆರವು ಮಾಡಿದೆ. ಎರಡು ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿತ್ತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತಾವರೆಘಟ್ಟದ ಸರ್ವೇ ನಂ.29ರಲ್ಲಿ ಗೋಮಾಳ ಜಾಗದಲ್ಲಿ ಸ್ಮಶಾನಕ್ಕೆ ಅಂತಾ 1.20ಎಕರೆಯನ್ನು ಸರ್ಕಾರ ಮಂಜೂರು ಮಾಡಿತ್ತು. ಈ ಜಾಗದಲ್ಲಿ ಕೆಲವರು ಒತ್ತುವರಿ ಮಾಡಿಕೊಂಡಿದ್ದರು. ತಾಲೂಕು ಆಡಳಿತ ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾದಾಗ ಕೆಲವರು ವಿರೋಧ ವ್ಯಕ್ತಪಡಿಸಿದ್ದರು.
ಶಾಸಕ ಸಂಗಮೇಶ್ವರ ಮತ್ತು ಮಾಜಿ ಶಾಸಕ ಅಪ್ಪಾಜಿಗೌಡ ಮಧ್ಯ ಪ್ರವೇಶಿಸಿದ್ದರು. ಈ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]