ತಾಲೂಕು ಪಂಚಾಯಿತಿ ಸಭೆಯಲ್ಲಿ ಉಪಾಧ್ಯಕ್ಷರಿಂದಲೇ ಧರಣಿ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

JOB JUNCTION 1 1

ಶಿವಮೊಗ್ಗ ಲೈವ್.ಕಾಂ | SORABA NEWS | 28 ಆಗಸ್ಟ್ 2020

ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಉಪಾಧ್ಯಕ್ಷರೆ ಧರಣಿ ನಡೆಸಿದ್ದಾರೆ. ಸಭೆಯ ವೇದಿಕೆ ಮುಂಭಾಗ ಸದಸ್ಯರೊಬ್ಬರ ಜೊತೆಗೆ ತಾಲೂಕು ಉಪಾಧ್ಯಕ್ಷರು ಧರಣಿ ನಡೆಸಿ, ಬೇಡಿಕೆ ಮುಂದಿಟ್ಟಿದ್ದಾರೆ.

ಉಪಾಧ್ಯಕ್ಷರ ಧರಣಿಗೆ ಕಾರಣವೇನು?

ಆನವಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಘಟಕ ನಿರ್ಮಿಸಲು ಉದ್ದೇಶಿಸಲಾಗಿತ್ತು. ಜನರು ವಿರೋಧ ವ್ಯಕ್ತಪಡಿಸಿದ್ದರಿಂದ ಸಾರ್ವಜನಿಕ ಸ್ಥಳದಲ್ಲಿ ಘಟಕ ಸ್ಥಾಪಿಸಿದಂತೆ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಆಗಸ್ಟ್ 25ರಂದು ಪೊಲೀಸ್ ಬಂದೋಬಸ್ತ್‍ನಲ್ಲಿ, ಸಾರ್ವಜನಿಕ ಸ್ಥಳದಲ್ಲೇ ಘಟಕ ಸ್ಥಾಪನೆಗೆ ಇಒ ಮತ್ತು ಪಿಡಿಓಗಳು ಮುಂದಾಗಿದ್ದರು. ಇದನ್ನು ವಿರೋಧಿಸಿ ಉಪಾಧ್ಯಕ್ಷ ಸುರೇಶ್ ಹಾವಣ್ಣನವರ್ ಮತ್ತು ಸದಸ್ಯ ಹನುಮಂತಪ್ಪ ಧರಣಿ ನಡೆಸಿದರು.

ಧರಣಿ ವಾಪಸ್‍

ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸುವ ಬಗ್ಗೆ ಶಾಸಕರು ಮತ್ತು ಮೇಲಾಧಿಕಾರಿಗಳ ಆದೇಶದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧ್ಯಕ್ಷೆ ನಯನಾ ಹೆಗಡೆ ಮತ್ತು ಸದಸ್ಯರು ನಿರ್ಣಯ ಕೈಗೊಂಡರು. ಆ ಬಳಿಕ ಧರಣಿ ಹಿಂಪಡೆಯಲಾಯಿತು.

ಏನೆಲ್ಲ ಚರ್ಚೆಯಾಯ್ತು?

ಎಂಟು ತಿಂಗಳಿಂದ ಶಿಕ್ಷಕರಿಗೆ ವೇತನ ಬಿಡುಗಡೆಯಾಗಿಲ್ಲ. ಕ್ಷೇತ್ರ ಶಿಕ್ಷಣಾಧಿಕಾರಿ ನಿರ್ಲಕ್ಷ್ಯದಿಂದಾಗಿ 44 ಲಕ್ಷ ಹಣ ವಾಪಸ್ ಹೋಗಿದೆ ಎಂದು ಸದಸ್ಯ ನಾಗರಾಜ್ ಚಿಕ್ಕಸವಿ ಅವರು ಸಭೆಯ ಗಮನಕ್ಕೆ ತಂದರು. ಎರಡು ದಿನದಲ್ಲಿ ಸಮಸ್ಯೆ ಬಗೆಹರಿಯಬೇಕು ಎಂದು ಅಧ್ಯಕ್ಷೆ ನಯನಾ ಹೆಗಡೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚಿಸಿದರು.

ಆನವಟ್ಟಿಯಲ್ಲಿ ಹೆಣ್ಣು ಮಕ್ಕಳ ವಿದ್ಯಾರ್ಥಿನಿಲಯ, ಸೊರಣಗಿ, ನೇರಲಗಿ, ಚಂದ್ರಗುತ್ತಿಯಲ್ಲಿ ನಿರ್ಮಾಣವಾಗುತ್ತಿರುವ ಅಂಬೇಡ್ಕರ್ ಭವನಗಳ ಕಾಮಗಾರಿ ಕಳಪೆಯಾಗಿದೆ. ಹಾಗಾಗಿ ಬಿಲ್ ಪಾವತಿಸದಂತೆ ನಿರ್ಣಯ ಕೈಗೊಂಡು, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಲು ನಿರ್ಣಯ ಕೈಗೊಳ್ಳಲಾಯಿತು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 28, 2020

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment