ಶಿವಮೊಗ್ಗ ಲೈವ್.ಕಾಂ | SHIMOGA / BHADRAVATHI NEWS | 3 ಸೆಪ್ಟಂಬರ್ 2020
ಭದ್ರಾವತಿ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ನಿಧನರಾಗಿದ್ದಾರೆ. ಕೋವಿಡ್ ಪರೀಕ್ಷೆಯಲ್ಲಿ ಅಪ್ಪಾಜಿಗೌಡ ಅವರಿಗೆ ಕರೋನ ಪಾಸಿಟಿವ್ ಬಂದಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಉಸಿರಾಟದ ಸಮಸ್ಯೆ
ಅಪ್ಪಾಜಿಗೌಡ ಅವರಿಗೆ ರಾತ್ರಿ ಮನೆಯಲ್ಲಿದ್ದಾಗ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೆ ಅವರನ್ನು ಭದ್ರಾವತಿಯಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕರೋನ ಟೆಸ್ಟ್
ಮೆಗ್ಗಾನ್ ಆಸ್ಪತ್ರೆಯಲ್ಲಿ ಮಾಜಿ ಶಾಸಕ ಅಪ್ಪಾಜಿಗೌಡ ಅವರಿಗೆ ಕರೋನ ಟೆಸ್ಟ್ ಮಾಡಲಾಗಿದೆ. ರಾಪಿಡ್ ಅಂಟಿಜೆನ್ ಟೆಸ್ಟ್‍ನಲ್ಲಿ ಕರೋನ ಪಾಸಿಟಿವ್ ಬಂದಿದೆ ಎಂದು ತಿಳಿದು ಬಂದಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೆ ನಿಧನರಾಗಿದ್ದಾರೆ.
ಆಸ್ಪತ್ರೆ ಬಳಿ ಅಭಿಮಾನಿಗಳು
ವಿಚಾರ ತಿಳಿಯುತ್ತಿದ್ದಂತೆ ಮೆಗ್ಗಾನ್ ಆಸ್ಪತ್ರೆ ಬಳಿ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು, ಬೆಂಬಲಿಗರು ಸೇರಿದ್ದಾರೆ. ಜನಪ್ರತಿಧಿನಿಗಳು, ಜೆಡಿಎಸ್ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. ಕೋವಿಡ್ ಹಿನ್ನೆಲೆ ಅಪ್ಪಾಜಿಗೌಡ ಅವರ ಪಾರ್ಥೀವ ಶರೀರ ದರ್ಶನಕ್ಕೆ ಅವಕಾಶ ಕಲ್ಪಿಸಿಲ್ಲ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]