ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಸೆಪ್ಟಂಬರ್ 2020
ಭರವಸೆ ಕೊಟ್ಟಂತೆ ಎರಡು ಕೋಟಿ ಉದ್ಯೋಗ ಸೃಷ್ಠಿಸುವಲ್ಲಿ ವಿಫಲವಾದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಶಿವಮೊಗ್ಗದಲ್ಲಿ ವಿದ್ಯಾರ್ಥಿ ಕಾಂಗ್ರೆಸ್ ವತಿಯಿಂದ ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಯಿತು.
ಮಹಾವೀರ ಸರ್ಕಲ್‍ನಲ್ಲಿ ಪ್ರತಿಭಟನೆ ನಡೆಸಿದ NSUI ಕಾರ್ಯಕರ್ತರು, ಟ್ರಾಫಿಕ್ ಸಿಗ್ನಲ್‍ನಲ್ಲಿ ನಿಂತವರಿಗೆ ಟೀ, ನ್ಯೂಸ್ ಪೇಪರ್ ಮತ್ತು ಮಾಸ್ಕ್ ಮಾರಾಟ ಮಾಡಿದರು. ಪ್ರತಿಯೊಬ್ಬರ ಬಳಿಯು ತೆರಳಿ ನಮ್ಮ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗ ಸೃಷ್ಟಿಸಿಲ್ಲ. ಹಾಗಾಗಿ ವ್ಯಾಪಾರ ಮಾಡುತ್ತಿದ್ದೇವೆ ಕೊಂಡುಕೊಳ್ಳಿ ಎಂದು ಮನವಿ ಮಾಡಿದರು.
ತಮ್ಮ ಕೊರಳಿಗೆ ಪದವಿ ವಿವರ ಇರುವ ಬೋರ್ಡು ತೂಗು ಹಾಕಿಕೊಂಡಿದ್ದ ವಿದ್ಯಾರ್ಥಿಗಳು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಎನ್‍ಎಸ್‍ಯುಐ ರಾಜ್ಯ ಉಪಾಧ್ಯಕ್ಷ ಚೇತನ್, ಶ್ರೀಜಿತ್, ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಧುಸೂದನ್, ಜಿಲ್ಲಾಧ್ಯಕ್ಷ ಬಾಲಾಜಿ, ಕಾರ್ಯಾಧ್ಯಕ್ಷ ವಿನಯ್, ನಗರಾಧ್ಯಕ್ಷ ವಿಜಯ್, ಗ್ರಾಮಾಂತರ ಅಧ್ಯಕ್ಷ ರವಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






