ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಸೆಪ್ಟಂಬರ್ 2020
ಬೊಮ್ಮನಕಟ್ಟೆಯಲ್ಲಿ ಕೆರೆ ಕೋಡಿ ಒಡೆದು ಅಕ್ಕಪಕ್ಕದ ಜಮೀನಿಗೆ ನೀರು ನುಗ್ಗಿದೆ. ನಾಟಿ ಮಾಡಿದ್ದ ಭತ್ತದ ಬೆಳೆ ಸಂಪೂರ್ಣ ಜಲಾವೃತವಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಭಾನುವಾರ ಸಂಜೆ ಸುರಿದ ಜೋರು ಮಳೆಯಿಂದ ಕೆರೆಗೆ ಭಾರಿ ಪ್ರಮಾಣದ ನೀರು ಹರಿದು ಬಂದಿದೆ. ಸೋಮಿನಕೊಪ್ಪ, ಗೆಜ್ಜೇನಹಳ್ಳಿ, ಕೋಟೆ ಗಂಗೂರು, ಬಸವನಗಂಗೂರು ಸೇರಿದಂತೆ ವಿವಿಧೆಡೆಯಿಂದ ನೀರು ಬೊಮ್ಮನಕಟ್ಟೆ ಕರೆಗೆ ಹರಿದು ಬರುತ್ತದೆ.
ಕೆರೆ ಕೋಡಿ ಒಡೆದು ಪಕ್ಕದ ಜಮೀನಿಗೆ ನೀರು ನುಗ್ಗಿದೆ. ಈಚೆಗಷ್ಟೆ ಭತ್ತದ ನಾಟಿ ಮಾಡಲಾಗಿತ್ತು. ಈಗ ಜಮೀನು ಸಂಪೂರ್ಣ ಜಲಾವೃತವಾಗಿದೆ. ಅಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]