ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಸೆಪ್ಟಂಬರ್ 2020
ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ವರದಿ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಡಿಎಸ್‍ಎಸ್ ಕಾರ್ಯಕರ್ತರು, ಸೆಪ್ಟೆಂಬರ್ ತಿಂಗಳಲ್ಲಿ ನಡೆಯುವ ವಿಧಾನ ಮಂಡಲ ಅಧಿವೇಶನದಲ್ಲಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಮಂಡಿಸಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
https://www.facebook.com/liveshivamogga/videos/716608112259457/?t=0
ಒಳ ಮೀಸಲಾತಿ ಜಾರಿಗೆ ತರುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗೆ ಇದೆ ಎಂದು ಇತ್ತೀಚೆಗೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಹಾಗಾಗಿ ಕೂಡಲೆ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿಗೊಳಿಸಿ ಒಳ ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಡಿಎಸ್‍ಎಸ್ ಜಿಲ್ಲಾ ಸಂಚಾಲಕ ಚಿನ್ನಯ್ಯ, ಖಜಾಂಚಿ ಸತ್ಯ ಭದ್ರಾವತಿ, ಪ್ರಮುಖರಾದ ಗುರುರಾಜ್, ರಾಜ್ ಕುಮಾರ್, ಪ್ರಕಾಶ್ ಲಿಗಾಡಿ ಸೇರಿದಂತೆ ಲವರು ಪ್ರತಿಭಟನೆಯಲ್ಲಿದ್ದರು.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]