ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 7 ಸೆಪ್ಟಂಬರ್ 2020
ಕರೋನ ನಿಯಂತ್ರಣದ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತು ಶಿವಮೊಗ್ಗ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ. ಮಾಜಿ ಶಾಸಕ ಅಪ್ಪಾಜಿಗೌಡ ಅವರಿಗೆ ಶಿವಮೊಗ್ಗದ ಅಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್ ಸಿಗದೆ ಮೃತಪಟ್ಟಿದ್ದಾರೆ. ಆದರೂ ಈ ವಿಚಾರವಾಗಿ ಜಿಲ್ಲಾಡಳಿತ ಗಂಭೀರವಾಗಿಲ್ಲ ಎಂದು ತೀರ್ಥಹಳ್ಳಿ ಕಾಂಗ್ರೆಸ್ ಆರೋಪಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ತೀರ್ಥಹಳ್ಳಿ ಕಾಂಗ್ರೆಸ್ ಕಾರ್ಯಕರ್ತರು, ಭದ್ರಾವತಿ ಆಸ್ಪತ್ರೆಗಳು, ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳು ಮತ್ತು ಸರ್ಕಾರಿ ಆಸ್ಪತ್ರೆಯಲ್ಲಿ ಬೆಡ್ ಮತ್ತು ವೆಂಟಿಲೇಟರ್ ವ್ಯವಸ್ಥೆಯಾಗುತ್ತಿಲ್ಲ. ಇವೆಲ್ಲ ಸಮಪರ್ಕವಾಗಿದ್ದರೆ ಮಾಜಿ ಶಾಸಕ ಅಪ್ಪಾಜಿಗೌಡ ಅವರು ಪ್ರಾಣಪಾಯದಿಂದ ಪಾರಾಗಬಹುದಿತ್ತು ಎಂದು ಕಾಂಗ್ರೆಸ್ ಕಾರ್ಯಕರ್ತರು ಅಭಿಪ್ರಾಯಪಟ್ಟರು.
ಮಾಜಿ ಶಾಸಕರಿಗೆ ಈ ಪರಿಸ್ಥಿತಿಯಾದರೆ ಸಾಮಾನ್ಯ ಜನರ ಕಥೆಯೇನು ಎಂದು ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು, ಕರೋನ ನಿಯಂತ್ರಣ ವಿಚಾರದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.
ಆರೋಗ್ಯ ಸಚಿವ ಶ್ರೀರಾಮುಲು ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ಕೂಡಲೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]