ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಸೆಪ್ಟಂಬರ್ 2020
ಇತಿಹಾಸ ಸಂಶೋಧಕ ಜಯದೇವಪ್ಪ ಜೈನಕೇರಿ ನಿಧನಕ್ಕೆ ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಅನಾರೋಗ್ಯಕ್ಕೆ ಒಳಗಾಗಿದ್ದರು
ಜಯದೇವಪ್ಪ ಜೈನಕೇರಿ (82) ಅವರು ಲೇಖಕ, ಇತಿಹಾಸ ಸಂಶೋಧಕರಾಗಿ ಚಾಪು ಮೂಡಿಸಿದ್ದರು. ವೈಚಾರಿಕ ಪ್ರಬಂಧ ಮಂಡನೆ, ದೇಗುಲಗಳ ಕುರಿತು ಬರಹ, ಉಪನ್ಯಾಸ, ಶರಣರು ಮತ್ತು ಶರಣ ಸಾಹಿತ್ಯದ ಕುರಿತು ಬರಹಗಳು, ಕೃತಿ ಪ್ರಕಟಿಣೆಯಲ್ಲಿ ತೊಡಗಿಸಿಕೊಂಡಿದ್ದರು.
ಆನಂದಪುರದ ಮುರುಘಾಮಠದ ಆವರಣದಲ್ಲಿ ವಸ್ತು ಸಂಗ್ರಹಾಲಯ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕೆಲ ಸಮಯದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಜಯದೇವಪ್ಪ ಜೈನಕೇರಿ ಅವರು ಸೋಮವಾರ ಕೊನೆಯುಸಿರೆಳೆದಿದ್ದಾರೆ. ಅವರ ನಿಧನಕ್ಕೆ ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.
ಶಿವಮೊಗ್ಗದ ಕುವೆಂಪು ರಸ್ತೆಯಲ್ಲಿ ಅವರ ಮನೆಯಿದ್ದು, ಇವತ್ತು ಬೆಳಗ್ಗೆ 11 ಗಂಟೆಗೆ ಮಂಡ್ಲಿ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]