ಮಾಜಿ ಶಾಸಕ ಅಪ್ಪಾಜಿಗೌಡ ಮನೆಗೆ ಬಜರಂಗದಳ ಕಾರ್ಯಕರ್ತರ ಭೇಟಿ, ಭಾವಚಿತ್ರಕ್ಕೆ ಪುಷ್ಪನಮನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 10 ಸೆಪ್ಟಂಬರ್ 2020

ಮಾಜಿ ಶಾಸಕ ಅಪ್ಪಾಜಿಗೌಡ ನಿಧನಕ್ಕೆ ಬಜರಂಗದಳ ಕಾರ್ಯಕರ್ತರು ಸಂತಾಪ ಸೂಚಿಸಿದ್ದಾರೆ. ಭದ್ರಾವತಿಯಲ್ಲಿ ಅಪ್ಪಾಜಿಗೌಡರ ನಿವಾಸಕ್ಕೆ ಭೇಟಿ ನೀಡಿದ ಬಜರಂಗದಳ ಕಾರ್ಯಕರ್ತರು, ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮೌನಾಚರಣೆ ಮಾಡಿದರು.

ಈ ವೇಳೆ  ಮಾತನಾಡಿದ ಬಜರಂಗದಳ ಜಿಲ್ಲಾ ಸಂಚಾಲಕ ಸುನಿಲ್ ಕುಮಾರ್, ಅಪ್ಪಾಜಿಗೌಡ ಅವರು ಬಡವರು, ಸಮಾಜದ ಕುರಿತು ಕಾಳಜಿ ಹೊಂದಿದ್ದರು. ಕ್ಷೇತ್ರದ ಭವಿಷ್ಯದ ಕುರಿತು ಭಗೀರಥನಂತೆ ಕನಸು ಕಂಡಿದ್ದರು. ಅವರನ್ನು ಕಳೆದುಕೊಂಡಿದ್ದು ದುಃಖದ ಸಂಗತಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದರು.

ಬಜರಂಗದಳ ತಾಲೂಕು ಸಂಚಾಲಕ ವಡಿವೇಲು, ಬಜರಂಗಳದ ಜಿಲ್ಲಾ ಮತ್ತು ತಾಲೂಕು ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment