ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಸೆಪ್ಟಂಬರ್ 2020
ಶಿವಮೊಗ್ಗ ತಾಲೂಕಿನ ಅಗಸವಳ್ಳಿ ಗ್ರಾಪಂ ವ್ಯಾಪ್ತಿಯ ರಾಮೇನಕೊಪ್ಪದಲ್ಲಿ ೬ ಕೋಟಿ ವೆಚ್ಚದ ರಸ್ತೆಗೆ ಸಂಸದ ಬಿ.ವೈ.ರಾಘವೇಂದ್ರ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಇದು ಹಾಯ್ ಹೊಳೆ ರಸ್ತೆಯಿಂದ ಬಸವಾಪುರ, ಈಚವಾಡಿ, ರಾಮೇನಕೊಪ್ಪದಿಂದ ನಗರದ ಎನ್.ಟಿ. ರಸ್ತೆಗೆ ಸಂಪರ್ಕ ಕಲ್ಪಿಸಲಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಬಳಿಕ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ರಾಜ್ಯದಲ್ಲಿ ಯಡಿಯೂರಪ್ಪ ಅವರ ಸರ್ಕಾರ ಅಭಿವೃದ್ಧಿಯ ಪರ್ವ ಕೈಗೊಂಡಿದೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲೂ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಹಿಂದೆಂದೂ ಆಗದಷ್ಟು ಅಭಿವೃದ್ಧಿ ಕಾಮಗಾರಿಗಳಿಗೆ ದಿನೇ ದಿನೇ ಚಾಲನೆ ಸಿಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ್, ಸಮಾರಂಭದಲ್ಲಿ ಜಿಪಂ ಸದಸ್ಯ ತಮ್ಮಡಿಹಳ್ಳಿ ನಾಗರಾಜ್ ಸೇರಿದಂತೆ ಹಲವರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]