ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಸೆಪ್ಟಂಬರ್ 2020
ಶಿವಮೊಗ್ಗ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕರೋನ ಆರ್ಭಟ ಹೆಚ್ಚಾಗುತ್ತಿದೆ. ಈಗ ಹತ್ತು ಸಾವಿರದ ಗಡಿ ದಾಟಿದ ಜಿಲ್ಲೆಗಳ ಪಟ್ಟಗೆ ಶಿವಮೊಗ್ಗ ಸೇರ್ಪಡೆಯಾಗಿದೆ. ಸೆ.9ರಂದು 335 ಮಂದಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 10,333ಕ್ಕೆ ಏರಿಕೆಯಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಯಾವ್ಯಾವ ತಾಲೂಕಿನಲ್ಲಿ ಎಷ್ಟು ಸೋಂಕಿತರು?
1454 ಮಂದಿಗೆ ಮನೆಯಲ್ಲಿ ಚಿಕಿತ್ಸೆ
ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 1454 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 198 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 240 ಮಂದಿ ಕೋವಿಡ್ ಕೇರ್ ಸೆಂಟರ್ನಲ್ಲಿ, 284 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
180 ಮಂದಿ ಸಾವು
ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ನಿಂದ ಮೃತಪಡುತ್ತಿರುವವರ ಸಂಖ್ಯೆಯು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬುಧವಾರ 6 ಮಂದಿ ಸಾವನ್ನಪ್ಪಿದ್ದಾರೆ. ಇದರಿಂದ ಒಟ್ಟು ಮೃತಪಟ್ಟ ಸೋಂಕಿತರ ಸಂಖ್ಯೆ 180ಕ್ಕೆ ಏರಿಕೆಯಾಗಿದೆ. ಇದು ಆತಂಕಕ್ಕೆ ಕಾರಣವಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]