ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020
ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯೊಬ್ಬರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ಎಂಟು ಸಾವಿರ ರುಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆದಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿಕಾರಿಪುರ ತಾಲೂಕು ಹೊಸೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶಿವಪ್ಪ, ಎಸಿಬಿ ಬಲೆಗೆ ಬಿದ್ದವರು.
ಲಂಚ ಕೇಳಿದ್ದು ಏಕೆ?
ನರೇಗಾ ಯೋಜನೆಯ 2.10 ಲಕ್ಷ ರೂ. ಹಣ ಬಿಡುಗಡೆ ಮಾಡಲು ಶಿವಪ್ಪ 8 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಮಂಜುನಾಥ್ ಎಂಬುವವರು ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಎಂಟು ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಶಿವಪ್ಪ ಅವರ ಮೇಲೆ ದಾಳಿ ನಡೆಸಿ ರೆಡ್ ಹ್ಯಾಂಡ್ ಆಗಿ ಹಿಡಿದು, ಬಂಧಿಸಲಾಗಿದೆ.
ಎಸಿಬಿ ಇನ್ಸ್‍ಪೆಕ್ಟರ್ ತಿಪ್ಪೇಸ್ವಾಮಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]