ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020
ಗಾಂಜಾ ಮಾರಾಟಗಾರರು, ಬೆಳಗಾರರ ವಿರುದ್ಧ ಶಿವಮೊಗ್ಗ ಪೊಲೀಸರು ಕಾರ್ಯಾಚರಣೆ ಬಿರುಸುಗೊಳಿಸಿದ್ದಾರೆ. ಜಿಲ್ಲೆಯ ಮೂರು ಕಡೆ ದಾಳಿ ನಡೆಸಿ ಅಪಾರ ಪ್ರಮಾಣದ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಎಲ್ಲೆಲ್ಲಿ ದಾಳಿಯಾಗಿದೆ?
ಪ್ರಕರಣ 1 | ಭದ್ರಾವತಿ
ಹಳೇನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಎಂಜಿನಿಯರಿಂಗ್ ವಿದ್ಯಾರ್ಥಿ ಶೇಖ್ ಅಬೂಬ್, ವೆಲ್ಡಿಂಗ್ ಕೆಲಸಗಾರ ಜಾಫರ್, ಸಾದಿಕ್, ಸಾದಿಕ್ ಪಾಷಾ ಎಂಬುವವರನ್ನು ಬಂಧಿಸಿದ್ದಾರೆ. ಇವರಿಂದ 1.250 ಕೆ.ಜಿ ಗಾಂಜಾ, ಎರಡು ಬೈಕ್‍ಗಳನ್ನು ವಶಕ್ಕೆ ಪಡೆಯಲಾಗಿದೆ.
ಪ್ರಕರಣ 2 | ಸಾಗರ
ಚಂದ್ರಮಾವಿನಕೊಪ್ಪಲು ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ವಿಕಾಶ್ (26) ಎಂಬಾತನನ್ನು ಬಂಧಿಸಿದ್ದಾರೆ. ಈತನಿಂದ 330 ಗ್ರಾಮ್ ಗಾಂಜಾ ವಶಕ್ಕೆ ಪಡೆಯಲಾಗಿದೆ. ಸಾಗರ ನಗರ ಇನ್ಸ್‍ಪೆಕ್ಟರ್ ಅಶೋಕ್ ಕುಮಾರ್, ಸಿಬ್ಬಂದಿಗಳಾದ ಸಂತೋಷ್, ಮಲ್ಲೇಶ್, ಹಜರತ್ ಅಲಿ, ಶ್ರೀಧರ ಕಾಳನಾಯ್ಕ, ಪ್ರಕಾಸ್, ಮಂಜಪ್ಪ, ಗುರುಬಸವ ದಾಳಿಯಲ್ಲಿ ಪಾಲ್ಗೊಂಡಿದ್ದರು.
ಪ್ರಕರಣ 3 | ಶಿಕಾರಿಪುರ
ಶಿಕಾರಿಪುರದಲ್ಲಿ ಡಿಸಿಐಬಿ ಪೊಲೀಸರು ದಾಳಿ ನಡೆಸಿ 27 ಕೆ.ಜಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಕಟ್ಟಿಗೆಹಳ್ಳಿ ಗ್ರಾಮದ ನಾಗರಾಜ್ ಎಂಬಾತ ತನ್ನ ಜಮೀನಿನಲ್ಲಿ ಬೆಳೆದಿದ್ದ 20 ಕೆ.ಜಿ. ಗಾಂಜಾ ವಶಕ್ಕೆ ಪಡೆಯಲಾಗಿದೆ. ಇನ್ನು, ಇದೇ ಗ್ರಾಮದ ಸ್ವಾಮಿರಾವ್ ತನ್ನ ಜಮೀನಿನಲ್ಲಿ ಬೆಳೆದಿದ್ದ 7 ಕೆ.ಜಿ 500 ಗ್ರಾಮ್ ಗಾಂಜಾ ವಶಕ್ಕೆ ಪಡೆಯಲಾಗಿದೆ. ಇವೆರಡು ಗಾಂಜಾದ ಮೌಲ್ಯದ 70 ಸಾವಿರ ಮೌಲ್ಯ ಎಂದು ಅಂದಾಜು ಮಾಡಲಾಗಿದೆ.
ಶಿಕಾರಿಪುರ ಉಪ ವಿಭಾಗ ಎಎಸ್‍ಪಿ ಶ್ರೀನಿವಾಸಲು ಮಾರ್ಗದರ್ಶನದಲ್ಲಿ ಡಿಸಿಐಬಿ ಇನ್ಸ್‍ಪೆಕ್ಟರ್ ಕುಮಾರಸ್ವಾಮಿ, ಶಿಕಾರಿಪುರ ಗ್ರಾಮಾಂತರ ಠಾಣೆ ಪಿಎಸ್‍ಐ ರವಿಕುಮಾರ್ ಮತ್ತು ಸಿಬ್ಬಂದಿಗಳು ದಾಳಿಯಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]