ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020
ಮಾದಕ ವಸ್ತುಗಳ ವಿರುದ್ಧವಾಗಿ ಮತ್ತು ಡ್ರಗ್ಸ್ ದಂಧೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಘಟಕ ಒತ್ತಾಯಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಯುವ ಮೋರ್ಚಾ ಕಾರ್ಯಕರ್ತರು, ರಾಜ್ಯದ ನೆಮ್ಮದಿ ಮತ್ತು ಹೆಸರನ್ನು ಕೆಡಿಸಿದ್ದ ಮಾದಕ ವಸ್ತು ಮಾರಾಟ ಜಾಲ ಮತ್ತು ಸೇವನೆಯ ವಿರುದ್ಧ ಸಿಎಂ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಗೃಹ ಸಚಿವಾಲಯ ಹಾಗೂ ಪೊಲೀಸ್ ಇಲಾಖೆ ಕಟ್ಟುನಿಟ್ಟಾಗಿ ಕ್ರಮ ಜರುಗಿಸುತ್ತಿದೆ. ಡ್ರಗ್ಸ್ ದಂಧೆ ಮಟ್ಟ ಹಾಕುವಲ್ಲಿ ಇಲಾಖೆ ಮತ್ತು ರಾಜ್ಯ ಸರ್ಕಾರಗಳ ಬದ್ಧತೆ ನಿಜಕ್ಕೂ ಪ್ರಶಂಸನೀಯ ಎಂದರು.
ಯಾವುದೇ ಒತ್ತಡಕ್ಕೆ ಮಣಿಯದೆ ಡ್ರಗ್ಸ್ ದಂಧೆ ಕುರಿತು ನಿಷಕ್ಷಪಾತ ತನಿಖೆ ನಡೆಸಿ, ಸೂಕ್ತ ಕ್ರಮಕೈಗೊಳ್ಳುವ ಮೂಲಕ ರಾಜ್ಯವನ್ನು ಡ್ರಗ್ಸ್ ದಂಧೆ ಮುಕ್ತವನ್ನಾಗಿ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]