ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಸೆಪ್ಟಂಬರ್ 2020
ಕಾರು ಮರಕ್ಕೆ ಡಿಕ್ಕಿ ಹೊಡೆದು ಓರ್ವ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ತಾಲೂಕು ಕಾಚಿನಕಟ್ಟೆ ಗ್ರಾಮದ ಬಳಿ ಘಟನೆ ಸಂಭವಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗದಿಂದ ಎನ್.ಆರ್.ಪುರಕ್ಕೆ ಕಾರು ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಕಾಚಿನಕಟ್ಟೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಓರ್ವ ಮೃತಪಟ್ಟಿದ್ದಾನೆ. ಮೂವರ ಸ್ಥಿತಿ ಗಂಭೀರವಾಗಿದೆ.
ಜೈಸನ್ (20) ಮೃತ ಯುವಕ. ಅಪಘಾತದ ರಭಸಕ್ಕೆ ಜೈಸನ್ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.
ಗಾಯಾಳುಗಳನ್ನು ಹೊರಗೆಳೆಯಲು ಹರಸಾಹಸ
ಮರಕ್ಕೆ ಅಪ್ಪಳಿಸಿದ ಕಾರಿನ ಬಾಗಿಲುಗಳು ಸಂಪೂರ್ಣ ಲಾಕ್ ಆಗಿತ್ತು. ಹಾಗಾಗಿ ಒಳಗಿದ್ದವರನ್ನು ಹೊರಗೆಳೆಯಲು ಸಾರ್ವಜನಿಕರು ಮತ್ತು ಪೊಲೀಸರು ಹರಸಾಹಸ ಪಡಬೇಕಾಯಿತು. ಕಟರ್‌ಗಳನ್ನು ಬಳಕೆ ಮಾಡಿಕೊಂಡು ಒಳಗಿದ್ದವರನ್ನು ಹೊರಗೆ ಕರೆತರಲಾಗಿದೆ.
ಅತಿ ವೇಗವೆ ಅಪಘಾತಕ್ಕೆ ಕಾರಣ
ಪ್ರಾಥಮಿಕ ಮಾಹಿತಿ ಪ್ರಕಾರ, ಕಾರು ಅತಿ ವೇಗವಾಗಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ತುಂಗಾ ನಗರ ಠಾಣೆ ಪಿಎಸ್ಐ ತಿರುಮಲೇಶ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]