ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಸೆಪ್ಟಂಬರ್ 2020
ಶಿವಮೊಗ್ಗದಲ್ಲಿ ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಸೋಂಕಿತರ ಸಂಖ್ಯೆ ಏರಿಕೆಯಾದಂತೆ, ಕೋವಿಡ್‍ನಿಂದ ಮೃತರಾಗುತ್ತಿರುವವರ ಸಂಖ್ಯೆಯು ಹೆಚ್ಚಳವಾಗುತ್ತಿದೆ. ಭಾನುವಾರಕ್ಕೆ ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸೋಂಕಿನಿಂದ ಮೃತರಾದವರ ಸಂಖ್ಯೆ ದ್ವಿಶತಕ ತಲುಪಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸೆಪ್ಟೆಂಬರ್ 13ರಂದು 6 ಮಂದಿ ಕೋವಿಡ್ ಸೋಂಕಿನಿಂದ ಮೃತರಾಗಿದ್ದಾರೆ. ಇದರಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಈವರೆಗೂ ಕರೋನಾಗೆ ಮೃತರಾದವರ ಸಂಖ್ಯೆ 202ಕ್ಕೆ ಏರಿಕೆಯಾಗಿದೆ.
ಜುಲೈ ತಿಂಗಳಲ್ಲಿ ಮೊದಲ ಸಾವು
ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ಕರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಮೇ.9ರಂದು. ಮೊದಲ ಸಾವಿನ ಪ್ರಕರಣ ವರದಿಯಾಗಿದ್ದು ಜುಲೈ 16ರಂದು. ಆಗಸ್ಟ್ 7ರ ಹೊತ್ತಿಗೆ ಸಾವಿನ ಸಂಖ್ಯೆ 52ಕ್ಕೆ ತಲುಪಿತ್ತು. ಆಗಸ್ಟ್ 24ಕ್ಕೆ 102ಕ್ಕೆ ಏರಿಕೆಯಾಗಿತ್ತು. ಸೆಪ್ಟೆಂಬರ್ 4ಕ್ಕೆ ಸಾವಿನ ಸಂಖ್ಯೆ 152ಕ್ಕೆ ತಲುಪಿತ್ತು. ಸೆಪ್ಟೆಂಬರ್ 13ರಕ್ಕೆ ಸಾವಿನ ಸಂಖ್ಯೆ 202ಕ್ಕೆ ಏರಿದೆ.
ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿರುವುದು ಜಿಲ್ಲೆಯಲ್ಲಿ ಆತಂಕ ಮೂಡಿಸಿದೆ. ಈ ನಡುವೆ ಆಸ್ಪತ್ರೆಗಳ ವಿರುದ್ಧ ಹಲವು ಅಪಾದನೆಗಳು ಕೇಳಿ ಬರುತ್ತಿವೆ. ಆದರೆ ಜನರು ಜಾಗೃತರಾದಷ್ಟು ಸೋಂಕು ಮತ್ತು ಸಾವಿನ ಸಂಖ್ಯೆಯನ್ನು ಸಂಪೂರ್ಣವಾಗಿ ತಗ್ಗಿಸಬಹುದಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]