ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಸೆಪ್ಟಂಬರ್ 2020
ಶಿವಮೊಗ್ಗದ ಕಾಚಿನಕಟ್ಟೆ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಮತ್ತೊಬ್ಬ ಯುವಕ ಮೃತನಾಗಿದ್ದಾನೆ. ಕಾರಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಮೃತರಾಗಿದ್ದು, ಇನ್ನಿಬ್ಬರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ದೊಡ್ಡಿಬೀಳು ಬಳಿ ಕಾರು ಅಪಘಾತಕ್ಕೀಡಾಯಿತು. ಎನ್.ಆರ್.ಪುರದ ಜೈಸನ್ (20) ಸ್ಥಳದಲ್ಲೆ ಮೃತರಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅನುರಾಗ್ (21) ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಮುನ್ನೆವೆ ಮೃತರಾಗಿದ್ದಾರೆ.
ವಿದ್ಯುತ್ ಕಂಬ, ಮರಕ್ಕೆ ಡಿಕ್ಕಿ
ಜೈಸನ್, ಅನುರಾಗ್, ಸಮಿತ್ ಸುಕುಮಾರ್, ಸಮಿತ್ ಎಂ.ಜೇಮ್ಸ್ ಅವರು ಭಾನುವಾರ ಬೆಳಗ್ಗೆ ಎನ್.ಆರ್.ಪುರದಿಂದ ಶಿವಮೊಗ್ಗಕ್ಕೆ ಬಂದಿದ್ದರು. ಕೆಲಸ ಮುಗಿಸಿ ಹಿಂತಿರುಗುವಾಗ ಅಪಘಾತವಾಗಿದೆ. ಅತಿ ವೇಗವಾಗಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮೊದಲಿಗೆ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಆ ಬಳಿಕ ಮರಕ್ಕೆ ಅಪ್ಪಳಿಸಿದೆ. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]