ಭದ್ರಾವತಿ ತಹಶೀಲ್ದಾರ್ ಸೇವೆಯಿಂದ ದಿಢೀರ್ ಬಿಡುಗಡೆ, ಲೈಂಗಿಕ ಕಿರುಕುಳದ ಆರೋಪ, ಬಂಧನಕ್ಕೆ ಆಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 15 ಸೆಪ್ಟಂಬರ್ 2020

ತಕ್ಷಣದಿಂದ ಜಾರಿಗೆ ಬರುವಂತೆ ಭದ್ರಾವತಿ ತಹಶೀಲ್ದಾರ್ ಶಿವಕುಮಾರ್ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ತಹಶೀಲ್ದಾರ್ ಅವರಿಗೆ ಭದ್ರಾವತಿಯ ಪ್ರಭಾರ ಜವಾಬ್ದಾರಿ ವಹಿಸಲಾಗಿದೆ.

ಈ ಸಂಬಂಧ ಸೋಮವಾರ ಆದೇಶ ಹೊರಡಿಸಲಾಗಿದೆ. ತಕ್ಷಣದಿಂದಲೇ ಈ ಆದೇಶ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

ತಹಶೀಲ್ದಾರ್ ದಿಢೀರ್ ಬಿಡುಗಡೆ ಏಕೆ?

ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಮಹಿಳೆಯೊಬ್ಬರಿಗೆ ತಹಶೀಲ್ದಾರ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ತಹಶೀಲ್ದಾರ್ ಅವರು ಫೋನ್ ಮೂಲಕ ಸಂಭಾಷಣೆ ನಡೆಸಿರುವ ಆಡಿಯೋ ಕ್ಲಿಪ್‍ಗಳು ಕೂಡ ಬಯಲಾಗಿದೆ.

119526452 1215679192126832 3731413404652929435 o.jpg? nc cat=105& nc sid=8024bb& nc ohc=zAV7aJ0sAV0AX9IuEpt& nc ht=scontent.fblr1 4

ಮಹಿಳೆ ಪರವಾಗಿ ದಲಿತ ಸಂಘಟನೆಗಳು, ಜನಪ್ರತಿನಿಧಿಗಳು ಪ್ರತಿಭಟನೆ ನಡೆಸಿದರು. ತಹಶೀಲ್ದಾರ್ ಅವರನ್ನು ಕೂಡಲೆ ಅಮಾನತು ಮಾಡಿ, ಎಫ್‍ಐಆರ್ ದಾಖಲಿಸಿ, ಬಂಧಿಸಬೇಕು ಎಂದು ಆಗ್ರಹಿಸಿದವು. ಇದರ ಬೆನ್ನಿಗೆ ಜಿಲ್ಲಾಧಿಕಾರಿ ಅವರು ಈ ಆದೇಶ ಹೊರಡಿಸಿದ್ದಾರೆ.

ನಗರಸಭೆ ಮಾಜಿ ಸದಸ್ಯ ಅಜಿತ್ ಗೌಡ, ಜಿಲ್ಲಾ ಪಂಚಾಯಿತಿ ಸದಸ್ಯ ಮಣಿಶೇಖರ್, ದಲಿತ ಮುಖಂಡ ಹಾಲೇಶಪ್ಪ, ಕುಬೇಂದ್ರನ್, ಮಂಜುನಾಥ್ ಸೇರಿದಂತೆ ಹಲವರು ಹಳೆನಗರ ಠಾಣೆ ಮುಂದೆ ಪ್ರತಿಭಟನೆ ಮಾಡಿ, ದೂರು ದಾಖಲಿಸುವಂತೆ ಒತ್ತಾಯಿಸಿದರು.

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment