ಶಿವಮೊಗ್ಗದ ಇನ್ಸ್‌ಪೆಕ್ಟರ್‌, ನಿವೃತ್ತ ಸಬ್ ಇನ್ಸ್‌ಪೆಕ್ಟರ್‌ ಫೇಸ್ ಬುಕ್ ಹ್ಯಾಕ್, ಸ್ನೇಹಿತರಿಂದ ಹಣಕ್ಕೆ ಡಿಮಾಂಡ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಸೆಪ್ಟಂಬರ್ 2020

ಪೊಲೀಸರ ಫೇಸ್‍ಬುಕ್ ಖಾತೆ ಮೇಲೆ ಖದೀಮರ ಕಣ್ಣು ಬಿದ್ದಿದೆ. ಕೆಲವರ ಫೇಸ್‍ಬುಕ್‍ ಖಾತೆ ಹ್ಯಾಕ್ ಮಾಡಿ, ಇನ್ನೂ ಕೆಲವರ ನಕಲಿ ಖಾತೆಗಳನ್ನು ಸೃಷ್ಟಿಸಿ, ಅವರ ಪರಿಚಿತರಿಂದ ಹಣ ವಸೂಲಿ ಮಾಡಲಾಗುತ್ತಿದೆ. ಈ ಖದೀಮರ ಹಾವಳಿಯಿಂದ ಪೊಲೀಸರು ಮುಜುಗರಕ್ಕೀಡಾಗಿದ್ದಾರೆ.

Facebook General Image 1 1

ಯಾರೆಲ್ಲರ ಫೇಸ್‍ಬುಕ್‍ ಹ್ಯಾಕ್ ಆಗಿದೆ?

ಕೇಸ್ 1

ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ಅಭಯ ಪ್ರಕಾಶ್ ಅವರ ಹೆಸರಿನಲ್ಲಿ ಫೇಸ್‍ಬುಕ್‍ನಲ್ಲಿ ನಕಲಿ ಖಾತೆಯನ್ನು ಸೃಷ್ಟಿಸಲಾಗಿದೆ. ಇದರ ಮೂಲಕ ಅವರ ಪರಿಚಿತರಿಗೆ ರಿಕ್ವಸ್ಟ್ ಕಳುಹಿಸಿ, ಫ್ರೆಂಡ್ ಮಾಡಿಕೊಂಡು, ಹಣ ಕೇಳಲಾಗಿದೆ. ತುರ್ತಾಗಿ ಹಣ ಬೇಕು ಎಂದು ಬೇಡಿಕೆ ಇಡಲಾಗಿದೆ. ಈಗಾಗಲೇ ಕೆಲವರು ಹಣ ನೀಡಿರುವ ಕುರಿತು ಮಾಹಿತಿ ಇದೆ.

ಕೇಸ್ 2

ಸಾಗರ ಗ್ರಾಮಾಂತರ ಠಾಣೆ ಇನ್ಸ್‍ಪೆಕ್ಟರ್ ಸುನಿಲ್ ಕುಮಾರ್ ಅವರ ಫೇಸ್‍ಬುಕ್‍ ಖಾತೆಯನ್ನು ಹ್ಯಾಕ್ ಮಾಡಲಾಗಿತ್ತು. ಅವರ ಸ್ನೇಹಿತರಿಂದ ಹಣಕ್ಕೆ ಬೇಡಿಕೆ ಇಡಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಾಗಿದೆ. ಆಗಸ್ಟ್ 27ರಂದು ಪ್ರಕರಣ ದಾಖಲಾಗಿತ್ತು.

ಕೇಸ್ 3

ಜಯನಗರ ಪೊಲೀಸ್ ಠಾಣೆಯ ನಿವೃತ್ತ ಸಬ್ ಇನ್ಸ್‍ಪೆಕ್ಟರ್ ಬಸವರಾಜು ಅವರ ಫೇಸ್‍ ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಫೇಸ್‍ ಬುಕ್ ಸ್ನೇಹಿತರಿಗೆ ಹತ್ತು ಸಾವಿರ ರೂ. ಕೊಡುವಂತೆ ಹ್ಯಾಕರ್‍ಗಳು ಕೇಳಿದ್ದಾರೆ. ಅವರ ಸ್ನೇಹಿತರು, ಸಂಬಂಧಿಗಳು ಕರೆ ಮಾಡಿ ವಿಚಾರಿಸಿದಾಗ ಹ್ಯಾಕ್ ಆಗಿರುವುದು ತಿಳಿದು ಬಂದಿದೆ. ಹಣ ನೀಡದಂತೆ ಬಸವರಾಜು ಅವರು ಮನವಿ ಮಾಡಿದ್ದಾರೆ.

ಸಂಜೆಯೊಳಗೆ ಹಣ ಕೊಡ್ತೀನಿ

ಪೊಲೀಸರ ನಕಲಿ ಖಾತೆಗಳಿಂದ ಅವರ ಪರಿಚಿತರಿಗೆ ಫೇಸ್‍ಬುಕ್‍ ಮೆಸೆಂಜರ್ ಮೂಲಕ ಮೆಸೇಜ್ ಕಳುಹಿಸಲಾಗುತ್ತದೆ. ಮೊದಲಿಗೆ ಉಭಯ ಕುಶಲೋಪರಿ ವಿಚಾರಿಸಿ, ನಂತರ ಹಣಕ್ಕೆ ಬೇಡಿಕೆ ಇಡಲಾಗುತ್ತದೆ. ಹತ್ತು ಸಾವಿರವೋ, ಇಪ್ಪತ್ತು ಸಾವಿರವೋ ಹಣ ಕೇಳಲಾಗುತ್ತದೆ. ಸಂಜೆಯೊಳಗೆ ಅಥವಾ ಒಂದೆರಡು ದಿನದಲ್ಲಿ ಹಣ ಹಿಂತಿರುಗಿಸುವ ಭರವಸೆ ನೀಡಲಾಗುತ್ತದೆ. ಆನ್‍ಲೈನ್ ಮೂಲಕ ಹಣ ವರ್ಗಾವಣೆ ಮಾಡಿಸಿಕೊಳ್ಳಲಾಗುತ್ತದೆ.

ಪೊಲೀಸರ ಹೆಸರಿನಲ್ಲಿ ನಕಲಿ ಖಾತೆ, ಹಣಕ್ಕೆ ಬೇಡಿಕೆ ಇಡುತ್ತಿರುವ ಕುರಿತು ಸೈಬರ್ ಕ್ರಮ್‍ ಠಾಣೆ ವತಿಯಿಂದ ಜಾಗೃತಿ ಸಂದೇಶ ಬಿಡುಗಡೆ ಮಾಡಲಾಗಿದೆ.

ಪೊಲೀಸರ ಹೆಸರಿನಲ್ಲಿ ನಕಲಿ ಖಾತೆ, ಪೊಲೀಸರ ಫೇಸ್‍ಬುಕ್ ಹ್ಯಾಕ್ ವಿಚಾರ ಈಗ ಗಂಭೀರ ಸ್ವರೂಪ ಪಡೆದುಕೊಂಡಿದೆ. ಹ್ಯಾಕರ್‍ಗಳ ಹೆಡೆಮುರಿ ಕಟ್ಟಲು ಬಲೆ ಬೀಸಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 16, 2020

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment