ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಸೆಪ್ಟಂಬರ್ 2020
ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಹಿನ್ನೆಲೆ ಶಿವಮೊಗ್ಗದ 17 ಪರೀಕ್ಷಾ ಕೇಂದ್ರದ ಸುತ್ತಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸೆಪ್ಟೆಂಬರ್ 21 ರಿಂದ 28ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶಿಸಿದ್ದಾರೆ.
ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಟೈಪಿಂಗ್, ಝೆರಾಕ್ಸ್ ಅಂಗಡಿಗಳು ರಾತ್ರಿ 10 ಗಂಟೆಯ ನಂತರ ತೆರೆಯುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ಸಂಬಂಧಪಟ್ಟ ಸಿಬ್ಬಂದಿ, ಅಧಿಕಾರಿಗಳನ್ನು ಹೊರತುಪಡಿಸಿ ಇತರರಿಗೆ ಪರೀಕ್ಷಾ ಕೇಂದ್ರಗಳೊಳಗೆ ಪ್ರವೇಶ ನಿಷೇಧಿಸಿದೆ.
ನಿರ್ಬಂಧಿತ ಪ್ರದೇಶದ ಸುತ್ತಮುತ್ತಲಲ್ಲಿ ಐದು ಮತ್ತು ಐದಕ್ಕಿಂತ ಹೆಚ್ಚಿನ ಜನರು ಸೇರುವುದನ್ನು ನಿಷೇಧಿಸಲಾಗಿದೆ. ಅಲ್ಲದೇ ಮೊಬೈಲ್ ಬಳಕೆಯನ್ನು ನಿಷೇದಿಸಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಆದೇಶ ನೀಡಿದ್ದಾರೆ.
ಪರೀಕ್ಷಾ ಕೇಂದ್ರಗಳು ಎಲ್ಲೆಲ್ಲಿವೆ?
ಶಿವಮೊಗ್ಗದ ಕರ್ನಾಟಕ ಪಬ್ಲಿಕ್ ಶಾಲೆ, ಕಸ್ತೂರಬಾ ಬಾಲಿಕಾ ಪ.ಪೂ.ಕಾಲೇಜ್, ದೇಶೀಯ ವಿದ್ಯಾ ಶಾಲೆ, ಬಸವೇಶ್ವರ ಪ್ರೌಢಶಾಲೆ, ರಾಷ್ಟ್ರೀಯ ಪದವಿ ಪೂರ್ವ ಕಾಲೇಜು, ಸ್ವಾಮಿ ವಿವೇಕಾನಂದ ಪ್ರೌ.ಶಾಲೆ, ಭದ್ರಾವತಿಯ ಸಿಲ್ವರ್ ಜ್ಯೂಬಿಲಿ ಪ.ಪೂ.ಕಾಲೇಜ್, ಸ.ಬಾಲಿಕಾ ಪ.ಪೂ.ಕಾಲೇಜ್, ಸ.ಪ.ಪೂ.ಕಾಲೇಜ್.
ಹೊಸನಗರದ ಸ.ಪ.ಪೂ.ಕಾಲೇಜ್, ಸಾಗರದ ಸ.ಪ.ಪೂ.ಕಾಲೇಜ್, ಶಿಕಾರಿಪುರದ ಸ.ಪ.ಪೂ. ಬಾಲಕರ ಮತ್ತು ಬಾಲಕೀಯರ ಕಾಲೇಜ್, ಬನಸಿರಿ ಲಯನ್ಸ್ ಪ್ರೌಢಶಾಲೆ. ಸೊರಬದ ಸ.ಪ.ಪೂ.ಕಾಲೇಜ್, ಕರ್ನಾಟಕ ಪಬ್ಲಿಕ್ ಶಾಲೆ ಆನವಟ್ಟಿ. ತೀರ್ಥಹಳ್ಳಿಯ ಸ.ಪ.ಪೂ.ಕಾಲೇಜ್ಗಳಲ್ಲಿ ಪರೀಕ್ಷೆಗಳು ನಡೆಯುತ್ತಿದೆ.
ಯಾರಾದರೂ ಪರೀಕ್ಷಾ ಕೇಂದ್ರಗಳ 200 ಮೀ ವ್ಯಾಪ್ತಿಯೊಳಗೆ ಪ್ರವೇಶಿಸಿದರೆ ಅಥವಾ ಪ್ರವೇಶಿಸಲು ಯತ್ನಿಸಿದರೆ ಅಂತಹವರನ್ನು ನಿರ್ದಾಕ್ಷಿಣ್ಯವಾಗಿ ಪೊಲೀಸರ ವಶಕ್ಕೆ ಒಪ್ಪಿಸಿ ಕೂಡಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ಸೂಚಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್, ಈತನ ಮೇಲಿವೆ 11 ಕೇಸ್, ಏನೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

- ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

About The Editor
ನಿತಿನ್ ಆರ್.ಕೈದೊಟ್ಲು
















