ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 20 ಸೆಪ್ಟಂಬರ್ 2020
ಭದ್ರಾ ಜಲಾಶಯದಿಂದ 50 ಸಾವಿರ ಕ್ಯೂಸೆಕ್‍ಗಿಂತಲೂ ಹೆಚ್ಚು ನೀರು ಹೊರ ಬಿಡಲಾಗುತ್ತಿದೆ. ಹಾಗಾಗಿ ಭದ್ರಾವತಿಯ ಹೊಸ ಸೇತುವೆ ಮೇಲೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಸೇತುವೆಯ ಎತ್ತರ ಕಡಿಮೆ ಇರುವುದರಿಂದ ಈ ಪ್ರಮಾಣದ ನೀರು ಹೊರ ಬರುತ್ತಿದ್ದಂತೆ ಮುಳುಗಡೆಯಾಗುತ್ತದೆ. ಹಾಗಾಗಿ ಸುರಕ್ಷತೆ ದೃಷ್ಟಿಯಿಂದ ಸೇತುವೆಯ ಎರಡು ಬದಿಯಲ್ಲೂ ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ. ಸೇತುವೆ ಸಮೀಪ ಜನರು ತೆರಳದಂತೆ ನಿರ್ಬಂಧ ವಿಧಿಸಲಾಗಿದೆ.
ಹಳೆ ಸೇತುವೆ ಮೇಲೆ ವಾಹನ ಸಂಚಾರ
ಹೊಸ ಸೇತುವೆ ಮೇಲೆ ವಾಹನ ಸಂಚಾರ ನಿರ್ಬಂಧ ವಿಧಿಸಿರುವುದರಿಂದ, ಹಳೆ ಸೇತುವೆ ಮೇಲೆ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಾಗಾಗಿ ಹಳೆ ಸೇತುವೆ ಮೇಲೆ ವಾಹನ ದಟ್ಟಣೆ ಹೆಚ್ಚಿದೆ. ಭಾನುವಾರ ಆದ್ದರಿಂದ ಟ್ರಾಫಿಕ್ ಜಾಮ್ ಭೀತಿ ಇಲ್ಲ.
ಮುಳುಗಿದ ಮಂಟಪ, ಕಣ್ತುಂಬಿಕೊಂಡ ಜನ
ಭದ್ರಾ ನದಿಯ ನಡುವೆ ಇರುವ ಶ್ರೀ ಸಂಗಮೇಶ್ವರದ ದೇವರ ಮಂಟಪ ಮುಳುಗಿದೆ. ಮಂಟಪದ ಮೇಲ್ಭಾಗ ಸ್ವಲ್ಪ ಕಾಣಿಸುತ್ತಿದೆ. ಇದನ್ನು ಕಣ್ತುಂಬಿಕೊಳ್ಳಲು ಮತ್ತು ಫೋಟೊ ತೆಗೆಯಲು ಜನರು ಹೊಳೆ ಬಳಿ ಬರುತ್ತಿದ್ದಾರೆ. ಜನರನ್ನು ನಿಯಂತ್ರಿಸಲು ಹೊಳೆ ಸಮೀಪ ಪೊಲೀಸರನ್ನು ನಿಯೋಜಿಸಲಾಗಿದೆ. ಅಲ್ಲದೆ ಹೊಳೆ ದಂಡೆ ಮೇಲಿರುವ ಬಡಾವಣೆ ನಿವಾಸಿಗಳು ಎಚ್ಚರಿದಿಂದ ಇರುವಂತೆ ಸೂಚಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422