ಪೌರ ಕಾರ್ಮಿಕರಿಗೆ ಬೆಳ್ಳಿ ದೀಪ ಕೊಟ್ಟು ಕಾಲಿಗೆ ಬಿದ್ದ ಶಿವಮೊಗ್ಗ ಮೇಯರ್, ಉಪಮೇಯರ್, ಕಾರ್ಪೊರೇಟರ್ಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಸೆಪ್ಟಂಬರ್ 2020

ಪೌರ ಕಾರ್ಮಿಕರ ದಿನಾಚರಣೆ ಹಿನ್ನೆಲೆ ಶಿವಮೊಗ್ಗದಲ್ಲಿ ಇವತ್ತು ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್, ಆಡಳಿತ ಮತ್ತು ವಿರೋಧ ಪಕ್ಷದ ನಾಯಕರು, ಪೌರ ಕಾರ್ಮಿಕರ ಕಾಲಿಗೆ ಬಿದ್ದು ಗೌರವ ಸಲ್ಲಿಸಿದರು.

ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಇವತ್ತು ಶಿವಮೊಗ್ಗ ಪಾಲಿಕೆಯ ಪೌರ ಕಾರ್ಮಿಕರಿಗೆ ಬೆಳ್ಳಿ ದೀಪ ವಿತರಿಸಿ, ಸನ್ಮಾನಿಸಿದರು. ಇದೆ ವೇಳೆ ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಆಡಳಿತ ಪಕ್ಷದ ನಾಯಕ ಚನ್ನಬಸಪ್ಪ, ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೇಶ್, ಮಾಜಿ ಮೇಯರ್ ಲತಾ ಗಣೇಶ್ ಅವರು ಪೌರ ಕಾರ್ಮಿಕರ ಕಾಲಿಗೆ ಬಿದ್ದು ಗೌರವ ಸಮರ್ಪಿಸಿದರು.

https://www.facebook.com/liveshivamogga/videos/325935515299843/?t=0

ಪೌರ ಕಾರ್ಮಿಕರಿಗೆ ಪಾಲಿಕೆಯಿಂದ ಮನೆ

ಕಾರ್ಯಕ್ರಮದಲ್ಲಿ ಮಾತನಾಡಿದ ಮೇಯರ್ ಸುವರ್ಣಾ ಶಂಕರ್, ಪೌರ ಕಾರ್ಮಿಕರ ಹಲವು ವರ್ಷದ ಕನಸಾಗಿದ್ದ ಮನೆ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ. ಅಕ್ಟೋಬರ್ 2ರಂದು ಗಾಂಧಿ ಜಯಂತಿಯಂದು ಮನೆ ನಿರ್ಮಾಣ ಕಾರ್ಯಕ್ಕೆ ಶಂಕುಸ್ಥಾಪನೆ ನೆರವೇರಸಲಾಗುತ್ತದೆ ಎಂದರು.

ಕರೋನದಿಂದ ಅಸುನೀಗಿದ ಇಬ್ಬರು ಪೌರ ಕಾರ್ಮಿಕರಿಗೆ ಮಹಾನಗರ ಪಾಲಿಕೆ ವತಿಯಿಂದ ಪರಿಹಾರ ನೀಡಲು ನಿರ್ಧರಿಸಲಾಗಿದೆ. ಮೃತ ಚನ್ನಮ್ಮ ಮತ್ತು ಪಾಪಾನಾಯ್ಕ ಅವರ ಕುಟುಂಬಕ್ಕೆ ತಲಾ 3 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಅಲ್ಲದೆ ಮೃತರ ಕುಟುಂಬದ ಒಬ್ಬರಿಗೆ ಪಾಲಿಕೆಯಲ್ಲಿ ಉದ್ಯೋಗ ನೀಡಲಾಗುತ್ತದೆ ಎಂದು ತಿಳಿಸಿದರು.

ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಕಾರ್ಪೊರೇಟರ್‍ಗಳು ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

119909669 961055577707686 682068807956211504 n.jpg? nc cat=103& nc sid=8024bb& nc ohc=Fu OV qGO6UAX Phl Y& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment