ಇನ್ನು 15 ದಿನ ಶಿವಮೊಗ್ಗ ಜಿಲ್ಲೆಯಾದ್ಯಂತ ವ್ಯಾಪಕ ಕರೋನ ಪರೀಕ್ಷೆ, ಎಲ್ಲೆಲ್ಲಿ ಪರೀಕ್ಷೆಯಾಗುತ್ತೆ? ದಿನಕ್ಕೆಷ್ಟು ಪರೀಕ್ಷೆಯಾಗಬೇಕು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119909669 961055577707686 682068807956211504 n.jpg? nc cat=103& nc sid=8024bb& nc ohc=Fu OV qGO6UAX Phl Y& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟಂಬರ್ 2020

ಕರೋನಾ ನಿಯಂತ್ರಿಸುವ ಕ್ರಮವಾಗಿ ಮುಂದಿನ 15 ದಿನ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಕರೋನಾ ಪರೀಕ್ಷೆಯನ್ನು ನಡೆಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸವೇಕ್ಷಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಶಿವಕುಮಾರ್ ಮುಂದಿನ 15 ದಿನ ಪ್ರತಿದಿನ ಕನಿಷ್ಟ 3 ಸಾವಿರ ಜನರಿಗೆ ಕರೋನಾ ಪರೀಕ್ಷೆ ನಡೆಸಬೇಕು. ಪ್ರತಿದಿನ 2 ಸಾವಿರ RTPCR ಮತ್ತು 1 ಸಾವಿರ ರಾಪಿಡ್ ಆಂಟಿಜನ್ ಟೆಸ್ಟ್ ನಡೆಸಬೇಕು ಎಂದು ಸೂಚಿಸಿದರು.

200520 Shimoga DC KB Shivakumar 1 1

ಗ್ರಾಮ ಪಂಚಾಯತ್ ವ್ಯಾಪ್ತಿಯಿಂದ ಹಿಡಿದು ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ತಾಲೂಕು ಆಸ್ಪತ್ರೆಗಳಲ್ಲಿ ಸಹ ಕರೋನಾ ತಪಾಸಣೆ ನಡೆಸಬೇಕು. ಇದಕ್ಕೆ ಅಗತ್ಯವಾದ ತಪಾಸಣಾ ಕಿಟ್‌ಗಳನ್ನು ಪೂರೈಕೆ ಮಾಡಲಾಗುವುದು ಎಂದು ಅವರು ಹೇಳಿದರು.

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ಸೂಕ್ತ ಚಿಕಿತ್ಸೆಗೆ ವ್ಯವಸ್ಥೆಯಾಗಬೇಕು

ಕರೋನಾ ಪರೀಕ್ಷೆ ಹೆಚ್ಚಳಕ್ಕೆ ಪೂರಕವಾಗಿ ಪಾಸಿಟಿವ್ ವ್ಯಕ್ತಿಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಎಲ್ಲಾ ವ್ಯವಸ್ಥೆಯನ್ನು ಮಾಡಬೇಕು. ರೋಗ ಲಕ್ಷಣವಿಲ್ಲದ ಕರೋನಾ ಪೀಡಿತರಿಗೆ ಹೋಂ ಕ್ವಾರೆಂಟೈನ್ ವ್ಯವಸ್ಥೆ ಕಲ್ಪಿಸಬೇಕು. ಹೋಂ ಕ್ವಾರೆಂಟೈನ್‌ನಲ್ಲಿರುವವರ ಆರೋಗ್ಯದ ಮೇಲೆ ನಿಗಾ ಇರಿಸಲು ವೈದ್ಯಾಧಿಕಾರಿಗಳನ್ನು ಒಳಗೊಂಡ ತಂಡಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ರಚಿಸಬೇಕು ಎಂದರು.

ರೋಗ ಲಕ್ಷಣವಿರುವ ಮತ್ತು ಚಿಕಿತ್ಸೆ ಅಗತ್ಯವಿರುವರನ್ನು ಮಾತ್ರ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಬೇಕು.  ಕೋವಿಡ್ ಆಸ್ಪತ್ರೆಗಳಲ್ಲಿ ಸೂಕ್ತ ಪ್ರಮಾಣದಲ್ಲಿ ಆಕ್ಸಿಜನ್ ಲಭ್ಯತೆಯನ್ನು ಖಾತ್ರಿಪಡಿಸಬೇಕು. ಮೆಗ್ಗಾನ್ ಆವರಣದಲ್ಲಿ ಇನ್ನೊಂದು ಆಕ್ಸಿಜನ್ ಪ್ಲಾಂಟ್ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಜಿಲ್ಲಾ ಸರ್ಜನ್ ಡಾ.ರಘುನಂದನ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 25, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment