ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಅಕ್ಟೋಬರ್ 2020
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ಎದುರು ಕೇಂದ್ರ, ರಾಜ್ಯ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರ ಪ್ರತಿಭಟನೆ ನಡೆಸುತ್ತಿದ್ದರು. ಸ್ಥಳಕ್ಕೆ ಆಗಮಿಸಿದ ಸಚಿವ ಈಶ್ವರಪ್ಪ, ಸಂಸದ ರಾಘವೇಂದ್ರ ಅವರು ಮನವಿ ಸ್ವೀಕರಿಸಲು ಬಂದಿದ್ದರು. ಇದೇ ವೇಳೆ ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದರು.
ಪ್ರತಿಭಟನಾ ಸ್ಥಳದಿಂದ ಸಚಿವ ಈಶ್ವರಪ್ಪ ಮತ್ತು ಸಂಸದ ರಾಘವೇಂದ್ರ ಅವರು ಹೊರಡುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಲು ಆರಂಭಿಸಿದರು. ಕೇಂದ್ರ, ರಾಜ್ಯ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಘೋಷಣೆ ಕೂಗುತ್ತಿದ್ದವರ ಕಡೆಗೆ ತಿರುಗಿದ ಸಚಿವ ಈಶ್ವರಪ್ಪ, ಕೈ ಮುಗಿದು ಕಾರು ಹತ್ತು ಹೊರಟರು.
ಇತ್ತ ಸಚಿವರ ಕಾರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕದಂತೆ ತಡೆಯಲು ಪೊಲೀಸರು ಬಂದೋಬಸ್ತ್ ಕೈಗೊಂಡರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






