ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 2 ಅಕ್ಟೋಬರ್ 2020
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ, ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ, ಭದ್ರಾವತಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಕಿಸಾನ್ – ಮಜ್ದೂರ್ ಬಚಾವೋ ದಿವಸ್ ಆಚರಿಸಲಾಯಿತು.
ತಾಲೂಕು ಕಚೇರಿ ಆವರಣದಲ್ಲಿ ಭದ್ರಾವತಿ ಕಾಂಗ್ರೆಸ್ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ ಮಾಡಲಾಯಿತು. ಈ ವೇಳೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ, ಕಾರ್ಮಿಕ ವಿರೋಧಿಯಾಗಿ ನಡೆದುಕೊಳ್ಳುತ್ತಿರುವುದನ್ನು ಖಂಡಸಲಾಯಿತು.
ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಚಂದ್ರೇಗೌಡ, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಷಡಾಕ್ಷರಿ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ.ಮೋಹನ್, ನಗರಸಭೆ ಸದಸ್ಯ ಚೆನ್ನಪ್ಪ, ಮಹಿಳಾ ಘಟಕ ಅಧ್ಯಕ್ಷೆ ಮಂಜುಳಾ ಸೇರಿದಂತೆ ಹಲವರು ಇದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






