ಶಿವಮೊಗ್ಗದ 201 ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕ, ಜಾಗ ಫೈನಲ್, ಏನದು ಘಟಕ? ಹೇಗಿರುತ್ತೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119909669 961055577707686 682068807956211504 n.jpg? nc cat=103& nc sid=8024bb& nc ohc=Fu OV qGO6UAX Phl Y& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಅಕ್ಟೋಬರ್ 2020

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿ ಮಾಡಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕಗಳನ್ನು ಸ್ಥಾಪನೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

ಹೊಳಲೂರು ಗ್ರಾಮ ಪಂಚಾಯತ್‍ನಲ್ಲಿ ಸ್ವಚ್ಚ ಸಂಕೀರ್ಣ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.

120302458 1230028047358613 8424163011761004079 o.jpg? nc cat=110& nc sid=8024bb& nc ohc=VZpodvFlP5YAX WKSbi& nc ht=scontent.fblr11 1

ಜಿಲ್ಲೆಯ 271 ಗ್ರಾಮ ಪಂಚಾಯತ್‍ಗಳ ಪೈಕಿ 201 ಗ್ರಾಮ ಪಂಚಾಯತ್‍ಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕ ಸ್ಥಾಪನೆಗೆ ಈಗಾಗಲೇ ಜಮೀನು ಗುರುತಿಸಲಾಗಿದ್ದು, ಕೆಲವು ಕಡೆಗಳಲ್ಲಿ ನಿರ್ಮಾಣ ಕಾಮಗಾರಿ ಆರಂಭವಾಗಿದೆ. ಪ್ರತಿ ಗ್ರಾಮ ಪಂಚಾಯತ್‍ಗೆ ತಲಾ 20 ಲಕ್ಷ ರೂ. ಅನುದಾನವನ್ನು ಬಿಡುಗಡೆ ಮಾಡಲಾಗುತ್ತಿದೆ. ತ್ಯಾಜ್ಯ ವಿಲೇವಾರಿ ಮಾತ್ರವಲ್ಲದೆ ಪ್ಲಾಸ್ಟಿಕ್‍ನಂತಹ ತ್ಯಾಜ್ಯಗಳನ್ನು ಮರು ಬಳಕೆ ಮಾಡುವ ವಿಧಾನಗಳನ್ನು ಸಹ ಇಲ್ಲಿ ಅಳವಡಿಸಲು ಪ್ರೋತ್ಸಾಹಿಸಲಾಗುವುದು ಎಂದು ಹೇಳಿದರು.

ಕಸ ವಿಲೇವಾರಿ ಬಗ್ಗೆ ಪ್ರತಿಯೊಬ್ಬರಿಗೂ ಅರಿವು

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಹ ಘನತ್ಯಾಜ್ಯ ವಿಲೇವಾರಿ ಘಟಕಗಳ ಸಮರ್ಪಕವಾದ ಅನುಷ್ಟಾನದಿಂದ ನಮ್ಮ ಗ್ರಾಮೀಣ ಪ್ರದೇಶಗಳು ಸ್ವಚ್ಛ ಸುಂದರ ಆರೋಗ್ಯಪೂರ್ಣವಾಗಲು ಸಾಧ್ಯವಾಗಲಿದೆ. ಕಸ ವಿಲೇವಾರಿ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.

120381516 1230027934025291 3231750456370294655 o.jpg? nc cat=104& nc sid=8024bb& nc ohc=gCaEn0etv8oAX91nVoe& nc ht=scontent.fblr11 1

ಆಕರ್ಷಕ ವಸ್ತು ಪ್ರದರ್ಶನ

ಅತಿ ಹೆಚ್ಚು ಬಚ್ಚಲು ಗುಂಡಿಗಳನ್ನು ನಿರ್ಮಿಸಿದ ಸೊರಬ ತಾಲೂಕು ಪಂಚಾಯತ್ ಹಾಗೂ ಶಿಕಾರಿಪುರ ತಾಲೂಕಿನ ಮುಡುಬ ಸಿದ್ದಾಪುರ ಗ್ರಾಮ ಪಂಚಾಯತ್ ಆಡಳಿತವನ್ನು ಸಚಿವರು ಈ ಸಂದರ್ಭದಲ್ಲಿ ಸನ್ಮಾನಿಸಿದರು. ಕಸ ವಿಲೇವಾರಿ ಹಾಗೂ ತ್ಯಾಜ್ಯಗಳ ಸಮರ್ಪಕ ಬಳಕೆ ಕುರಿತು ವಿವಿಧ ಗ್ರಾಮ ಪಂಚಾಯತ್‍ಗಳು ಸಜ್ಜುಗೊಳಿಸಿದ್ದ ವಸ್ತು ಪ್ರದರ್ಶನ ಮಳಿಗೆಗಳು ಆಕರ್ಷಕವಾಗಿದ್ದವು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಸ್ವಾಗತಿಸಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್, ಉಪಾಧ್ಯಕ್ಷೆ ವೇದಾ ವಿಜಯ ಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಸುವರ್ಣಾ ಶಂಕರ್, ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಸದಸ್ಯ ಕೆ.ಇ.ಕಾಂತೇಶ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment