ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 3 ಅಕ್ಟೋಬರ್ 2020
ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ ದಲಿತ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ತೀರ್ಥಹಳ್ಳಿಯಲ್ಲಿ ಪಂಜಿನ ಮೆರವಣಿಗೆ ನಡೆಸಿ, ಪ್ರತಿಭಟನೆ ನಡೆಸಲಾಯಿತು.

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ತೀರ್ಥಹಳ್ಳಿಯ ಗಾಂಧಿ ಚೌಕ್‍ನಲ್ಲಿ ಪಂಜಿನ ಮೆರವಣಿಗೆ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಸರ್ಕಾರ, ಉತ್ತರ ಪ್ರದೇಶ ಸರ್ಕಾರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿದರು. ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನೆ ವೇಳೆ ಮಾತನಾಡಿದ ಕೆಪಿಸಿಸಿ ವಕ್ತಾರ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಸಂವಿಧಾನ ಕೊಟ್ಟಿರುವ ನಾಗರಿಕ ಹಕ್ಕುಗಳನ್ನು ಮೋದಿ ಸರ್ಕಾರ ಧಮನಗೊಳಿಸುತ್ತಿದೆ. ಉತ್ತರ ಪ್ರದೇಶದ ಯುವತಿ ಮೇಲೆ ಅತ್ಯಾಚಾರ ಮಾಡಿದವರಿಗೆ ಶಿಕ್ಷೆಯಾಗಬೇಕಿದೆ. ಅತ್ಯಾಚಾರಕ್ಕೆ ಅವಕಾಶ ಮಾಡಿಕೊಟ್ಟ ಕೇಂದ್ರ ಮತ್ತು ಉತ್ತರ ಪ್ರದೇಶದ ಸರ್ಕಾರದ ವಿರುದ್ಧ ಪ್ರತಿಭಟನೆ, ಹೋರಾಟಗಳು ನಿರಂತರವಾಗಬೇಕು ಎಂದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





