ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಅಕ್ಟೋಬರ್ 2020
ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಶಿವಮೊಗ್ಗದಲ್ಲಿ ಕ್ಯಾಂಡಲ್ ಹಿಡಿದು ಪ್ರತಿಭಟನೆ ನಡೆಸಲಾಯಿತು. ವಿವಿಧ ಪ್ರಗತಿಪರ ಸಂಘಟನೆಗಳು, ಸಾಹಿತಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಯುವತಿಯ ಭಾವಚಿತ್ರದ ಮುಂದೆ ಕ್ಯಾಂಡಲ್ ಬೆಳಗಿಸಿ, ಗೋಪಿ ಸರ್ಕಲ್‍ನಲ್ಲಿ ಪ್ರತಿಭಟನೆ ನಡೆಸಲಾಯಿತು.
VIDEO REPORT
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ವಕೀಲ ಕೆ.ಪಿ.ಶ್ರೀಪಾಲ್, ರಾಮ ಮಂದಿರ ನಿರ್ಮಾಣ ಮಾಡಿ, ರಾಮ ರಾಜ್ಯ ಸೃಷ್ಟಿಸುತ್ತೇವೆ ಅಂದಿದ್ದರು. ಆದರೆ ರಾಮ ಮಂದಿರದ ನಾಡಿನಲ್ಲೇ ಯುವತಿ ಮೇಲೆ ಅತ್ಯಾಚಾರವಾಗಿದೆ. ಸಾಯುವ ಮೊದಲು ಆ ಯುವತಿ ನೀಡಿದ್ದ ಹೇಳಿಕೆಯನ್ನು ಮರೆಗೆ ಸರಿಸಲಾಗುತ್ತಿದೆ ಎಂದು ಆರೋಪಿಸಿದರು.

ಲೇಖಕ ಪ್ರೊ. ರಾಜೇಂದ್ರ ಚೆನ್ನಿ ಸೇರಿದಂತೆ ಹಲವರು ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ದಲಿತ ಸಂಘರ್ಷ ಸಮಿತಿ ಮುಖಂಡ ಗುರುಮೂರ್ತಿ, ಲೇಖಕರಾದ ಶಿ.ಜು.ಪಾಶಾ, ಕಾರ್ಯನಿರತ ಪತ್ರಕರ್ತರ ಸಂಘದ ರವಿಕುಮಾರ್ ಸೇರಿದಂತೆ ಹಲವರು ಕ್ಯಾಂಡಲ್ ಲೈಟ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






