ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಅಕ್ಟೋಬರ್ 2020
ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆ ಹಾಗೂ ಕಚೇರಿಯ ಮೇಲೆ ಸಿಬಿಐ ದಾಳಿ ನಡೆಸಿರುವುದನ್ನು ಮಹಾನಗರಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೀಶ್ ಮತ್ತು ಪಾಲಿಕೆಯ ಕಾಂಗ್ರೆಸ್ ಸದಸ್ಯರು ಖಂಡಿಸಿದ್ದಾರೆ.
ಶಿರಾ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಸೋಲಿನ ಭೀತಿಯಲ್ಲಿರುವ ಬಿಜೆಪಿ ಈ ಮೂಲಕ ರಾಜಕೀಯ ಸಂಚು ನಡೆಸುತ್ತಿರುವುದು ಖಂಡನೀಯ. ಬಿಜೆಪಿ ನಾಯಕರು ಭ್ರಮೆಯಲ್ಲಿದ್ದಾರೆ ಮತ್ತು ಭಯದಲ್ಲಿದ್ದಾರೆ. ಇಲ್ಲದಿದ್ದರೆ ಚುನಾವಣಾ ಸಮಯ ದಲ್ಲಿಯೇ ಕಾಂಗ್ರೆಸ್ ನಾಯಕರ ಮನೆ ಮೇಲೆ ಸಿಬಿಐ ದಾಳಿ ನಡೆಸುವುದೇಕೆ ಎಂದು ಪ್ರಶ್ನಿಸಿದ್ದಾರೆ.

ಈ ಸಂಬಂಧ ಕಾಂಗ್ರೆಸ್ ಕಾರ್ಪೊರೇಟರ್‍ಗಳು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಪಾಲಿಕೆ ಸದಸ್ಯರಾದ ಆರ್.ಸಿ.ನಾಯ್ಕ, ಯಮುನಾ ರಂಗೇಗೌಡ, ರಮೇಶ್ ಹೆಗ್ಡೆ, ಶಾಮೀರ್ ಖಾನ್, ರೇಖಾ ರಂಗನಾಥ್, ಮಂಜುಳಾ ಶಿವಣ್ಣ, ಮೆಹಕ್ ಷರೀಫ್ ಅವರು ಸಹಿ ಮಾಡಿ, ಸಿಬಿಐ ದಾಳಿಯನ್ನು ಖಂಡಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು















