ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಅಕ್ಟೋಬರ್ 2020
ನಾಲ್ಕು ವರ್ಷದ ಹಿಂದೆ ಶಿವಮೊಗ್ಗದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಪ್ರಕರಣದ ತೀರ್ಪು ಹೊರಬಿದ್ದಿದೆ. ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಶಿವಮೊಗ್ಗ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿದೆ.
VIDEO REPORT
ಏನಿದು ಪ್ರಕರಣ?
2016ರಲ್ಲಿ ಅಪ್ರಾಪ್ತೆ ಮೇಲೆ ಶಿವಕುಮಾರ್ ಅಲಿಯಾಸ್ ಕುಮಾರ್ ಎಂಬಾತ ಅತ್ಯಾಚಾರ ಎಸಗಿದ್ದ. ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಶಿವಮೊಗ್ಗದ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು.

ಕಠಿಣ ಶಿಕ್ಷೆ, ದಂಡ
ವಿಚಾರಣೆ ನಡೆಸಿದ ಒಂದನೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿ ಶಿವಕುಮಾರ್ಗೆ ಕಠಿಣ ಶಿಕ್ಷೆ ವಿಧಿಸಿದೆ. 14 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಲಾಗಿದೆ.
ಸರ್ಕಾರದ ಪರವಾಗಿ ಪ್ರಭಾರ ವಿಶೇಷ ಅಭಿಯೋಜಕ ಕೆ.ಎಸ್.ಸತೀಶ್ ಅವರು ವಾದ ಮಂಡಿಸಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






