ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಅಕ್ಟೋಬರ್ 2020
ಜಿಲ್ಲಾಧಿಕಾರಿ ಶಿವಕುಮಾರ್ ಅವರು ಇವತ್ತು ಶಿವಮೊಗ್ಗ ವಿಮಾನ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣದ ಬಳಿ ನಡೆಯುತ್ತಿರುವ ರಿಂಗ್ ರಸ್ತೆ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸೋಗಾನೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪರಶೀಲನೆ ನಡೆಸಿದ ಜಿಲ್ಲಾಧಿಕಾರಿ ಶಿವಕುಮಾರ್ ಅವರು ಕಾಮಗಾರಿ ಪ್ರಗತಿ ಕುರಿತು ಮಾಹಿತಿ ಪಡೆದರು. ಅಲ್ಲದೆ ಕಾಮಗಾರಿ ಕುರಿತು ಕೆಲವು ಸೂಚನೆ ನೀಡಿದರು. ಸದ್ಯ ಅಪ್ರೋಚ್ ರಸ್ತೆ, ರನ್ ವೇ, ಕಾಂಪೌಂಡ್ ನಿರ್ಮಾಣ ಕಾಮಗಾರಿ ನಡೆಯುತ್ತಿದೆ.
ರೈಲ್ವೆ ನಿಲ್ದಾಣ ಮುಂಭಾಗ ರಿಂಗ್ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಅದನ್ನು ಜಿಲ್ಲಾಧಿಕಾರಿ ಅವರು ಪರಿಶೀಲನೆ ನಡೆಸಿದರು. ಇಲ್ಲಿ ಡ್ರೈನಿಂಗ್ ಕಾಮಗಾರಿ ನಡೆಯುತ್ತಿದೆ. ಮಳೆಗಾಲ ಮುಗಿದಿರುವುದರಿಂದ, ರಸ್ತೆ ಕಾಮಗಾರಿ ಆರಂಭಿಸುವ ಕುರಿತು ಗುತ್ತಿಗೆದಾರರು, ಎಂಜಿನಿಯರ್ಗಳ ಜೊತೆ ಚರ್ಚಿಸಿದರು.
ಸಿಎಂ ಭೇಟಿ ಹಿನ್ನೆಲೆ ಪರಿಶೀಲನೆ
ಅಕ್ಟೋಬರ್ 19ರಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಪ್ರವಾಸದ ವೇಳೆ ಹಲವು ಕಾರ್ಯಕ್ರಮಗಳು, ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಸೋಗಾನೆಯಲ್ಲಿ ವಿಮಾನ ನಿಲ್ದಾಣದ ಕಾಮಗಾರಿ ಪರಿಶೀಲನೆ ನಡೆಸಲು ಅಲ್ಲಿಗೆ ಭೇಟಿ ನೀಡುವ ಸಾದ್ಯತೆ ಇದೆ. ಹಾಗಾಗಿ ಇವತ್ತು ಜಿಲ್ಲಾಧಿಕಾರಿ ಅವರು ಈ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ತಹಶೀಲ್ದಾರ್ ನಾಗರಾಜ್ ಅವರು ಈ ವೇಳೆ ಜಿಲ್ಲಾಧಿಕಾರಿ ಅವರೊಂದಿಗೆ ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]