ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 ಅಕ್ಟೋಬರ್ 2020
ಮಾಜಿ ಶಾಸಕ ಅಪ್ಪಾಜಿಗೌಡ ಅವರ ಸ್ಮರಣಾರ್ಥ ಭದ್ರಾವತಿಯ ಕೂಡ್ಲಿಗೆರೆ ಸರ್ಕಲ್ನಲ್ಲಿ ಬಸ್ ನಿಲ್ದಾಣ ನಿರ್ಮಿಸಲಾಗಿದೆ. ಜಿಲ್ಲಾ ಪಂಚಾಯಿತಿ ಸದಸ್ಯ ಮಣಿಶೇಖರ್ ಅವರು ತಮ್ಮ ವೈಯಕ್ತಿಕ ಖರ್ಚಿನಲ್ಲಿ ನಿರ್ಮಿಸಿರುವ ಬಸ್ ನಿಲ್ದಾಣವನ್ನು, ಇವತ್ತು ಲೋಕಾರ್ಪಣೆ ಮಾಡಲಾಯಿತು.

ಅಪ್ಪಾಜಿಗೌಡ ಅವರ ಪತ್ನಿ ಶಾರದಾ ಅಪ್ಪಾಜಿಗೌಡ ಅವರು ಬಸ್ ನಿಲ್ದಾಣಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಅಪ್ಪಾಜಿಗೌಡ ಅವರ ಋಣ ತೀರಿಸಬೇಕು ಅಂತಾ ಈ ಭಾಗದ ಜನರು ಇಷ್ಟೊಂದು ಪ್ರೀತಿ ತೋರಿಸುತ್ತಿದ್ದಾರೆ. ಅದಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಮಣಿಶೇಖರ್ ಮಾತನಾಡಿ, ಅಪ್ಪಾಜಿಗೌಡ ಅವರು ನಮ್ಮನ್ನು ಬೆಳೆಸಿ, ಪೋಷಿಸಿ, ಅಗಲಿ ಒಂದು ತಿಂಗಳು ಹನ್ನೊಂದು ದಿನವಾಗಿದೆ. ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ಕೂಡ್ಲಿಗೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಅವರ ಹೆಸರಿನಲ್ಲಿ ಬಸ್ ನಿಲ್ದಾಣ ನಿರ್ಮಿಸಲಾಗಿದೆ ಎಂದರು.
ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್, ಶಿಮುಲ್ ಅಧ್ಯಕ್ಷ ಆನಂದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.


ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















