ಪಾನ್ ಮಸಾಲ ನಿಷೇಧದತ್ತ ಸರ್ಕಾರದ ಚಿತ್ತ, ಅಡಿಕೆ ಬೆಳೆಗಾರರಲ್ಲಿ ಆತಂಕ, ಹೋರಾಟದ ಎಚ್ಚರಿಕೆ ನೀಡಿದ ರೈತ ಸಂಘ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಅಕ್ಟೋಬರ್‌ 2020

ಪಾನ್ ಮಸಾಲ ನಿಷೇಧಕ್ಕೆ ಸುಗ್ರೀವಾಜ್ಞೆ ತರಲು ರಾಜ್ಯ ಸರ್ಕಾರ ಯೋಚಿಸಿದೆ‌. ಇದಕ್ಕೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವಿರೋಧ ವ್ಯಕ್ತಪಡಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಗೌರವಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ, ಇತ್ತೀಚೆಗೆ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಗೃಹ ಸಚಿವ ಬೊಮ್ಮಾಯಿ ಅವರು, ಪಾನ್ ಮಸಾಲ ಪ್ಯಾಕೆಟ್‌ನಲ್ಲಿ ಡ್ರಗ್ಸ್ ಪೂರೈಕೆ ಮಾಡಲಾಗುತ್ತಿದೆ. ಹಾಗಾಗಿ ಪಾನ್ ಮಸಾಲ ನಿಷೇಧಕ್ಕೆ ಸುಗ್ರೀವಾಜ್ಞೆ ಹೊರಡಿಸಲು ಯೋಜಿಸಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಐದು ರುಪಾಯಿಯ ಪಾನ್ ಮಸಾಲದಲ್ಲಿ ಸಾವಿರಾರು ಬೆಲೆಯ ಡ್ರಗ್ಸ್ ಮಿಕ್ಸ್ ಮಾಡಿ ಮಾರಾಟ ಮಾಡಲು ಸಾದ್ಯವಿದೆಯಾ. ಹಾಗಾಗಿ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದರೆ ತೀವ್ರ ಪ್ರತಿಭಟನೆ ನಡೆಸಲಿದ್ದೇವೆ ಎಂದು ತಿಳಿಸಿದರು.

ಪಾನ್ ಮಸಾಲ ನಿಷೇಧದಿಂದ ಅಡಿಕೆ ಬೆಳೆಗಾರರ ಮೇಲೆ ನೇರ ಪರಿಣಾಮ ಉಂಟಾಗುತ್ತದೆ. ಹತ್ತು ರಾಜ್ಯದಲ್ಲಿ ಅಡಿಕೆ ಬೆಳೆಯಲಾಗುತ್ತದೆ. ಬೆಳೆಗಾರರು ಮಾತ್ರವಲ್ಲ ಕೃಷಿ ಕಾರ್ಮಿಕರು, ಮಂಡಿ ಕಾರ್ಮಿಕರು, ಹಮಾಲರು, ಕೈಗಾಡಿಯವರು, ಲಾರಿ ಮಾಲೀಕರು, ಚಾಲಕರು ಸೇರಿ ಅಸಂಖ್ಯ ಜನರು ಅಡಿಕೆ ಮೇಲೆ ಅವಲಂಬಿತವಾಗಿದ್ದಾರೆ. ಪರಂಪರಾಗತವಾಗಿ ಬಂದಿರುವ ಪಾನ್ ಮಸಾಲ ನಿಷೇಧ ಮಾಡಿದರೆ ಇವರೆಲ್ಲರ ಮೇಲೆ ಬದುಕಿನ ಮೇಲೆ ಪರಿಣಾಮ ಉಂಟಾಗಲಿದೆ ಎಂದು ಬಸವರಾಜಪ್ಪ ತಿಳಿಸಿದರು.

ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವ ನಿರ್ಧಾರ ಕೈಬಿಡದಿದ್ದರೆ ರೈತರು ಹೋರಾಟ ನಡೆಸಬೇಕಾಗುತ್ತದೆ ಎಂದು ಬಸವರಾಜಪ್ಪ ಎಚ್ಚರಿಕೆ ನೀಡಿದರು.

ಜಿಲ್ಲಾ ಕಾರ್ಯಾಧ್ಯಕ್ಷ ಪಿ.ಡಿ.ಮಂಜಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ್, ಜಿಲ್ಲಾಧ್ಯಕ್ಷ ಶಿವಮೂರ್ತಿ, ತಾಲೂಕು ಪ್ರಧಾನ ಕಾರ್ಯದರ್ಶಿ ಜ್ಞಾನೇಶ್, ರಾಜ್ಯ ಉಪಾಧ್ಯಕ್ಷ ಹಿಟ್ಟೂರು ರಾಜು ಸುದ್ದಿಗೋಷ್ಠಿಯಲ್ಲಿ ಇದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 14, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment