ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 15 ಅಕ್ಟೋಬರ್ 2020
ಶಿವಮೊಗ್ಗದ ಗಾಂಧಿ ಬಜಾರ್ ಬಳಿ ದರೋಡೆಗೆ ಹೊಂಚು ಹಾಕುತ್ತಿದ್ದ ನಾಲ್ವರು ಅಂತರ ಜಿಲ್ಲಾ ದರೋಡೆಕೋರರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಇವರಿಂದ ಒಂದು ಪಿಸ್ತೂಲು, ನಾಲ್ಕು ಗುಂಡು, ಒಂದು ಚಾಕು, ನಾಲ್ಕು ಮೊಬೈಲ್ ಮತ್ತು ಕೃತ್ಯಕ್ಕೆ ಬಳಸುತ್ತಿದ್ದ ಕಾರನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ಮಧ್ಯಪ್ರದೇಶ ಮೂಲದ ಬಳ್ಳಾರಿಯ ಮೋತಿ ಸರ್ಕಲ್ ನಿವಾಸಿ ಸುರೇಶ್ ಸಿಂಗ್ (20), ಬಳ್ಳಾ ಪೋರ್ಟ್ ರಸ್ತೆ ನಿವಾಸಿ ರಣವೀರ್ ಸಿಂಗ್ (34), ರಾಯದುರ್ಗ ರಸ್ತೆಯ ರಾಮಲಾಲ್ (21) ಬಂಧಿತ ದರೋಡೆಕೋರರು.

ಆರೋಪಿಗಳು ದರೋಡೆಯ ಉದ್ದೇಶದಿಂದಲೇ ಬಳ್ಳಾರಿಯಿಂದ ಶಿವಮೊಗ್ಗಕ್ಕೆ ಕಾರಿನಲ್ಲಿ ಬಂದಿದ್ದರು. ಖಚಿತ ಮಾಹಿತಿ ಮೇರೆಗೆ ಡಿವೈಎಸ್‍ಪಿ ಉಮೇಶ್ ನಾಯಕ್ ಮಾರ್ಗದರ್ಶನದಲ್ಲಿ ದಾಳಿ ನಡೆಸಲಾಯಿತು. ದೊಡ್ಡಪೇಟೆ ಠಾಣೆ ಸರ್ಕಲ್ ಇನ್ಸ್‍ಪೆಕ್ಟರ್ ವಸಂತ್ ಕುಮಾರ್ ನೇತೃತ್ವದಲ್ಲಿ ಪಿಎಸ್ಐ ಮಂಜಮ್ಮ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





