ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಅಕ್ಟೋಬರ್ 2020
ಕಳೆದ ವರ್ಷ ನೆರೆ ಹಾನಿಯಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ತಕ್ಷಣವೇ ರಾಜ್ಯ ಸರ್ಕಾರ ಪರಿಹಾರದ ಹಣ ಬಿಡುಗಡೆ ಮಾಡಬೇಕು ಎಂದು ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕ ಹೆಚ್.ಸಿ.ಯೋಗೇಶ್ ಆಗ್ರಹಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಭಾರಿ ಮಳೆಗೆ ಸಾಕಷ್ಟು ಜನರು ಮನೆ ಕಳೆದುಕೊಂಡು, ಬೀದಿಗೆ ಬಿದ್ದಿದ್ದರು. ಪೂರ್ಣ ಮನೆ ಬಿದ್ದವರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಿತ್ತು. ತಾತ್ಕಾಲಿಕವಾಗಿ 1 ಲಕ್ಷ ರೂ. ಹಣ ನೀಡಿದ್ದಾರೆ. ಇನ್ನೂ 4 ಲಕ್ಷ ನೀಡಬೇಕಿದೆ ಎಂದು ಹೇಳಿದರು.
840 ಮನೆಗಳಿಗೆ 4 ಲಕ್ಷ ರೂ. ಅಂದರೆ 33.60 ಕೋಟಿ ರೂ. ಪರಿಹಾರದ ಹಣ ಬಿಡುಗಡೆ ಮಾಡಬೇಕಿದೆ. ಸಿಎಂ ಅವರು ಘೋಷಣೆ ಮಾಡಿದಂತೆ ಸಂತ್ರಸ್ತರಿಗೆ ಹಣ ಬಿಡುಗಡೆ ಆಗಬೇಕಿದೆ. ಆದರೆ ಈವರೆಗೂ ಹಣ ಬಿಡುಗಡೆ ಆಗಿಲ್ಲ. ಹಾಗಾಗಿ ಸಂತ್ರಸ್ತು ಬೀದಿಯಲ್ಲೇ ಬದುಕು ನಡೆಸುವಂತೆ ಆಗಿದೆ ಎಂದರು.
ಇಷ್ಟೆಲ್ಲ ಸಮಸ್ಯೆ ಇದ್ದರೂ ಶಿವಮೊಗ್ಗ ಮಹಾನಗರ ಪಾಲಿಕೆ ಬಿಜೆಪಿ ಸದಸ್ಯರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಇದಕ್ಕೂ ತಮಗೂ ಸಂಬಂಧವೇ ಇಲ್ಲ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ಯೋಗೇಶ್ ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿದ್ದ ಸಂತ್ರಸ್ತ ಮಹಿಳೆಯೊಬ್ಬರು ತಮ್ಮ ನೋವು ಹೇಳಿಕೊಂಡು ಕಣ್ಣೀರು ಹಾಕಿದರು.
ಪಾಲಿಕೆ ಸದಸ್ಯರಾದ ರಮೇಶ್ ಹೆಗ್ಡೆ, ಆರ್.ಸಿ.ನಾಯ್ಕ್, ಕಾಶಿ ವಿಶ್ವನಾಥ್, ಯಮುನಾ ರಂಗೇಗೌಡ, ರೇಖಾ ರಂಗನಾಥ್ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]