ಅಡುಗೆ ಆದ ಮೇಲೆ ಬಡಿಸೋಕೆ ಕಾಂಗ್ರೆಸ್, ಜೆಡಿಎಸ್ ಪೈಪೋಟಿ, ಕುಮಾರಸ್ವಾಮಿ ಅವರಿಗೆ ಈ ಸರ್ಕಸ್ ಶೋಭೆಯಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಅಕ್ಟೋಬರ್ 2020

ಅತಿಥಿ ಉಪನ್ಯಾಸಕರ ಬಾಕಿ ವೇತನದ ವಿಚಾರದಲ್ಲಿ ರಾಜಕೀಯ ಲಾಭಕ್ಕಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸರ್ಕಸ್ ಮಾಡುತ್ತಿದ್ದಾರೆ. ಇದು ಅವರಿಗ ಶೋಭೆ ತರುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ವಿಧಾನ ಪರಿಷತ್‌ನ ಶಿಕ್ಷಕರು ಮತ್ತು ಪದವೀಧರರ ಕ್ಷೇತ್ರದ ಚುನಾವಣೆ ಇರುವ ಕಾರಣಕ್ಕೆ ಕುಮಾರಸ್ವಾಮಿ ಅವರು ಅತಿಥಿ ಉಪನ್ಯಾಸಕರ ಬಾಕಿ ವೇತನದ ಕುರಿತು ಸರ್ಕಾರಕ್ಕೆ ಆಗ್ರಹಿಸುತ್ತಿದ್ದಾರೆ. ಆದರೆ ಸದನದಲ್ಲಿ ಈ ವಿಚಾರವನ್ನು ನಾನು ಪ್ರಸ್ತಾಪ ಮಾಡಿದಾಗ ಕುಮಾರಸ್ವಾಮಿ ಅವರು ಒಮ್ಮೆಯು ಧ್ವನಿ ಎತ್ತಲಿಲ್ಲ. ಅಡಿಗೆ ಆದ ಮೇಲೆ ಬಡಿಸೋಕೆ ಕಾಂಗ್ರೆಸ್, ಜೆಡಿಎಸ್ ಪೈಪೋಟಿಗೆ ಇಳಿದಿದ್ದಾರೆ ಎಂದು ಆರೋಪಿಸಿದರು.

22 ಸಾವಿರ ಅತಿಥಿ ಶಿಕ್ಷಕರ ಬಗ್ಗೆ ಮಾತಿಲ್ಲ

ಅತಿಥಿ ಉಪನ್ಯಾಸಕರ ಬಾಕಿ ವೇತನ ಬಿಡುಗಡೆಗೆ ಸರ್ಕಾರ ಸಿದ್ದತೆ ಮಾಡಿಕೊಂಡಿದೆ. ಇದನ್ನು ತಿಳಿದುಕೊಂಡು ಕುಮಾರಸ್ಚಾಮಿ ಅವರು ಈಗ ಆಗ್ರಹಪಡಿಸುತ್ತಿದ್ದಾರೆ. 22 ಸಾವಿರ ಅತಿಥಿ ಶಿಕ್ಷಕರು, ಐಟಿಐ ಶಿಕ್ಷಕರಿಗೆ ವೇತನ ಬಾಕಿ ಇದೆ. ಈ ಬಗ್ಗೆ ಏಕೆ ಧ್ವನಿ ಎತ್ತುತ್ತಿಲ್ಲ. ಕುಮಾರಸ್ವಾಮಿ ಅವರು ತಮ್ಮ ಅವಧಿಯಲ್ಲಿ ಐದು ಸಾವಿರ ವೇತನ ಹೆಚ್ಚಳ ಮಾಡುವುದಾಗಿ ಅತಿಥಿ ಉಪನ್ಯಾಸಕರ ಮೂಗಿಗೆ ತುಪ್ಪ ಸವರಿದ್ದರು ಎಂದು ಆಯನೂರು ಮಂಜುನಾಥ್ ಆರೋಪಿಸಿದರು.

87 ಕೋಟಿ ಬಾಕಿ ವೇತನಅತಿಥಿ ಉಪನ್ಯಾಸಕರಿಗೆ ಬಾಕಿ ವೇತನ ಕೊಡುವ ಕುರಿತು ಉನ್ನತ ಶಿಕ್ಷಣ ಇಲಾಖೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ. ಉನ್ನತ ಶಿಕ್ಷಣ ಸಚಿವರಿಗೆ ಕರೋನ ಬಂದ ಹಿನ್ನೆಲೆ ಪ್ರಸ್ತಾವನೆ ಸಲ್ಲಿಕೆ ತಡವಾಗಿತ್ತು. 87 ಕೋಟಿ ರೂ. ಪ್ರಸ್ತಾವನೆ ಸಲ್ಲಿಕೆಯಾಗಿದೆ. ಸದ್ಯದಲ್ಲೇ ವೇತನ ಬಿಡುಗಡೆ ಆಗಲಿದೆ. ಸದನದಲ್ಲಿ ತಾವು ಧ್ವನಿ ಏರಿಸಿದ್ದರಿಂದಲೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಆಯನೂರು ಮಂಜುನಾಥ್ ತಿಳಿಸಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 17, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment