ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ನಿವೇಶನ, ಮನೆ ನಿರ್ಮಾಣಕ್ಕೆ ಆದ್ಯತೆ, ಶಿಕಾರಿಪುರದಲ್ಲಿ ಸಿಎಂ ಘೋಷಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 20 ಅಕ್ಟೋಬರ್ 2020

ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ನಿವೇಶನ ಒದಗಿಸುವುದು ಹಾಗೂ ಹಂತ ಹಂತವಾಗಿ ಮನೆಗಳನ್ನು ನಿರ್ಮಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

ಶಿಕಾರಿಪುರದಲ್ಲಿ ಆಯೋಜಿಸಲಾಗಿದ್ದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

122175593 3375012585880515 5734087161839013303 o.jpg? nc cat=101& nc sid=8024bb& nc ohc=VXAFx8zYKZ4AX9lsLIg& nc ht=scontent.fblr11 1

ಪ್ರತಿಯೆಬ್ಬರಿಗೂ ಮನೆ ಮನೆಗೆ ಹಕ್ಕುಪತ್ರ ತಲುಪಿಸಲಾಗುವುದು. ಮಧ್ಯವರ್ತಿಗಳಿಗೆ ಯಾರೂ ಹಣ ನೀಡಬಾರದು. ಯಾರಾದರೂ ದುಡ್ಡು ಕೇಳಿದರೆ ಜಿಲ್ಲಾದಧಿಕಾರಿಗೆ ದೂರು ನೀಡುವಂತೆ ಅವರು ತಿಳಿಸಿದರು.

ಈ ಬಾರಿ ಉತ್ತಮ ಮಳೆಯಾಗಿದ್ದು, ಕೃಷಿಯನ್ನು ಸುಸ್ತಿರಗೊಳಿಸುವುದು ಸರ್ಕಾರದ ಗುರಿಯಾಗಿದೆ.  ತಾಲೂಕಿನಲ್ಲಿ ಮೆಕ್ಕೆ ಜೋಳ ಉತ್ತಮವಾಗಿ ಬಂದಿದ್ದು, ಕಾಳು ಬಿಡಿಸುವ ಯಂತ್ರವನ್ನು ರೈತರಿಗೆ ಸಬ್ಸಿಡಿ ದರದಲ್ಲಿ ಒದಗಿಸಲಾಗುತ್ತಿದೆ. ಇದಕ್ಕಾಗಿ ಶಿಕಾರಿಪುರ ತಾಲೂಕಿಗೆ 1.40ಕೋಟಿ ರೂ ನಿಗದಿಪಡಿಸಲಾಗಿಗೆ ಎಂದರು.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಲೋಕಸಬಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ಶಿಕಾರಿಪುರ ತಾಲೂಕಿನ 14 ಗ್ರಾಮ ಪಂಚಾಯತ್ ವ್ಯಾಪ್ತಿಯ 403 ಫಲಾನುಭವಿಗಳಿಗೆ ಇಂದು ಹಕ್ಕುಪತ್ರ ವಿತರಿಸಲಾಗುತ್ತಿದೆ. ಮುಂದಿನ ಒಂದೆರಡು ವಾರಗಳ ಒಳಗಾಗಿ ಇನ್ನೂ 13 ಗ್ರಾಮ ಪಂಚಾಯತ್ ವ್ಯಾಪ್ತಿಯ 1ಸಾವಿರ ಜನರಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದರು.

ಸೌಲಭ್ಯಗಳ ವಿತರಣೆ

ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ನಿವೇಶನ ರಹಿತರಿಗೆ ಹಕ್ಕುಪತ್ರ, ಕೃಷಿಕರಿಗೆ ಕೃಷಿ ಯಂತ್ರೋಪಕರಣ, ವಿದ್ಯಾರ್ಥಿಗಳಿಗೆ ಲಾಪ್ ಟಾಪ್, ಆಕಸ್ಮಕವಾಗಿ ಸಾವಿಗೀಡಾದ ರೈತರಿಗೆ ಪರಿಹಾರ ಧನ ವಿತರಿಸಿದರು.

ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯತ್ ಸಿಇಒ ವೈಶಾಲಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

122157951 983105098836067 919178029140229400 n.jpg? nc cat=108& nc sid=110474& nc ohc=Z4424M0SXEEAX Q9KCW& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 20, 2020

Leave a Comment