ಶಿವಮೊಗ್ಗ ದಸರಾ, ಸಕ್ರೆಬೈಲಿನಿಂದ ಆಗಮಿಸಿದ ಗಜಪಡೆ, ಪಾಲಿಕೆಯಿಂದ ಗಜಪೂಜೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಅಕ್ಟೋಬರ್ 2020

ಶಿವಮೊಗ್ಗ ದಸರಾ ಹಿನ್ನೆಲೆ ನಗರಕ್ಕೆ ಆಗಮಿಸಿದ ಗಜಪಡೆಗೆ ಮಹಾನಗರ ಪಾಲಿಕೆ ವತಿಯಿಂದ ಗಜಪೂಜೆ ನೆರವೇರಿಸಲಾಯಿತು. ವಿಜಯದಶಮಿ ಮೆರವಣಿಗೆಯಲ್ಲಿ ಗಜಪಡೆ ಭಾಗವಹಿಸಲಿವೆ.

ಸಕ್ರೆಬೈಲಿನ ಸಾಗರ, ಭಾನುಮತಿ, ಬಾಲಣ್ಣ ಆನೆಗಳು ಶಿವಮೊಗ್ಗ ದಸರಾದಲ್ಲಿ ಭಾಗವಹಿಸಲು ಆಗಮಿಸಿವೆ. ಕೋಟೆ ರಸ್ತೆಯ ವಾಸವಿ ಶಾಲೆ ಆವರಣದಲ್ಲಿ ಆನೆಗಳು ಉಳಿಯಲು ಜಾಗ ಕಲ್ಪಿಸಲಾಗಿದೆ.

ಮೇಯರ್ ನೇತೃತ್ವದಲ್ಲಿ ಗಜಪೂಜೆ

ಮೂರು ಆನೆಗಳಿಗೆ ಶಿವಮೊಗ್ಗ ಪಾಲಿಕೆ ಮೇಯರ್ ಸುವರ್ಣಾ ಶಂಕರ್ ನೇತೃತ್ವದಲ್ಲಿ ಗಜಪೂಜೆ ನೆರವೇರಿಸಲಾಯಿತು. ಉಪ ಮೇಯರ್ ಸುರೇಖಾ ಮುರಳೀಧರ್, ಆಡಳಿತ ಪಕ್ಷದ ನಾಯಕ ಚನ್ನಬಸಪ್ಪ, ವಿರೋಧ ಪಕ್ಷದ ನಾಯಕ ಯೋಗೇಶ್, ಕಾರ್ಪೊರೇಟರ್‍ಗಳು ಈ ವೇಳೆ ಉಪಸ್ಥಿತರಿದ್ದರು. ಆನೆಗಳಿಗೆ ಪೂಜೆ ಸಲ್ಲಿಸಿ, ಆರತಿ ಬೆಳಗಲಾಯಿತು.

ಮೆರವಣಿಗೆಯಲ್ಲಿ ಇರುತ್ತೆ ಗಜಪಡೆ

ವಿಜಯದಶಮಿ ಹಿನ್ನೆಲೆಯಲ್ಲಿ ಇವತ್ತು ಸಾಂಪ್ರದಾಯಿಕ ಮೆರವಣಿಗೆ ನಡೆಯಲಿದೆ. ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಮುಂಭಾಗದಿಂದ ಮೆರೆವಣಿಗೆ ಹೊರಡಲಿದೆ. ಈ ಮೆರವಣಿಗೆಯಲ್ಲಿ ಗಜಪಡೆ ಭಾಗವಹಿಸಲಿದೆ. ರಾಮಣ್ಣ ಶ್ರೇಷ್ಠಿ ಪಾರ್ಕ್‍ ವರೆಗೆ ಆನೆಗಳು ಮೆರವಣಿಗೆಯಲ್ಲಿ  ಇರಲಿವೆ.

ಆನೆ ನೋಡಲು ಜನವೋ ಜನ

ಆನೆಗಳು ಬಂದಿರುವ ವಿಚಾರ ತಿಳಿದು ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿ ಶಾಲೆ ಆವರಣಕ್ಕೆ ಆಗಮಿಸಿದ್ದರು. ಮಕ್ಕಳ ಸಂಖ್ಯೆಯೆ ಹೆಚ್ಚಿತ್ತು. ಎಲ್ಲರು ಆನೆ ಬಳಿಗೆ ಬಂದು ಫೋಟೊ, ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದರು. ಜನರನ್ನು ನಿಯಂತ್ರಿಸಲು ಪೊಲೀಸರನ್ನು ನಿಯೋಜಿಸಲಾಗಿತ್ತು.

122569515 985496425263601 186764312706410466 o.jpg? nc cat=109&ccb=2& nc sid=110474& nc ohc=ULbZk K2k6gAX Vx3dX& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 26, 2020

Leave a Comment