ಶಿವಮೊಗ್ಗ ಲೈವ್.ಕಾಂ | SHIMOGA NEWS | 7 NOVEMBER 2020
ಶಿವಮೊಗ್ಗ ಮಹಾನಗರ ಪಾಲಿಕೆಯ ನೈರ್ಮಲ್ಯೀಕರಣ ಹಾಗೂ ಘನತ್ಯಾಜ್ಯ ವಸ್ತುಗಳ ಪ್ಲಾಸ್ಟಿಕ್ ತ್ಯಾಜ್ಯ, ಕಟ್ಟಡ ತ್ಯಾಜ್ಯ ಹಾಗೂ ಇತರೆ ತ್ಯಾಜ್ಯಗಳ ನಿರ್ವಹಣೆ ಮತ್ತು ವಿಲೇವಾರಿಗೆ ಸಂಬಂಧಿಸಿದಂತೆ ಸರ್ಕಾರವು ಇತ್ತೀಚೆಗೆ ಅಧಿಸೂಚನೆ ಹೊರಡಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಈ ಅಧಿಸೂಚನೆ ಅನ್ವಯ ಶಿವಮೊಗ್ಗದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಖಾಲಿ ನಿವೇಶನ ಹೊಂದಿರುವ ಮಾಲೀಕರಿಗೆ ಪಾಲಿಕೆಯಿಂದ ಸೂಚನೆ ನೀಡಲಾಗಿದೆ. ನಿವೇಶನಗಳಲ್ಲಿ ತ್ಯಾಜ್ಯ, ಗಿಡಗಂಟೆಗಳು ಬೆಳೆದು ನೆರೆಹೊರೆಯ ನಿವಾಸಿಗಳಿಗೆ, ಸಾರ್ವಜನಿಕರಿಗೆ ತೀವ್ರತರಹದ ಕಿರಿಕಿರಿಯಾಗುತ್ತಿರುವ ಬಗ್ಗೆ ಅನೇಕ ದೂರುಗಳು ಬಂದಿವೆ ಎಂದು ಪಾಲಿಕೆ ತಿಳಿಸಿದೆ.
ಖಾಲಿ ನಿವೇಶನಗಳ ಮಾಲೀಕರು ತಮ್ಮ ನಿವೇಶನದಲ್ಲಿರುವ ತ್ಯಾಜ್ಯ ಹಾಗೂ ಗಿಡಗಂಟೆಗಳನ್ನು ತೆರವುಗೊಳಿಸಿ ಸ್ವಚ್ಚವಾಗಿಟ್ಟುಕೊಳ್ಳಲು ಸೂಚಿಸಲಾಗಿದೆ. ತಪ್ಪಿದಲ್ಲಿ ಪಾಲಿಕೆ ವತಿಯಿಂದ ದಂಡ ವಿಧಿಸಿ, ಕಾನೂನು ರೀತ್ಯ ಸೂಕ್ತ ಕ್ರಮ ವಹಿಸಲಾಗುವುದು ಎಂದು ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]