ಪಾಪನಾಯ್ಕ ಪತ್ನಿಗೆ ಮೂರು ಲಕ್ಷದ ಚೆಕ್, ಕರೋನ ವಾರಿಯರ್ ಅಂತಾ ಯಾವಾಗ ಆಗುತ್ತೆ ಘೋಷಣೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 NOVEMBER 2020

ಕರೋನದಿಂದ ಮೃತಪಟ್ಟ ಮಹಾನಗರ ಪಾಲಿಕೆ ಗುತ್ತಿಗೆ ನೌಕರ ಪಾಪನಾಯ್ಕ ಅವರ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಲಾಯಿತು. ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್ ನೇತೃತ್ವದ ನಿಯೋಗ ಪಾಪನಾಯ್ಕ ಅವರ ಮನೆಗೆ ತೆರಳಿ ಚಿಕ್ ವಿತರಿಸಿದರು.

ಮೂರು ಲಕ್ಷದ ಚೆಕ್ ವಿತರಣೆ

ಪಾಪನಾಯ್ಕ ಅವರ ಪತ್ನಿ ಸವಿತಾ ಅವರಿಗೆ ಮೂರು ಲಕ್ಷ ರುಪಾಯಿಯ ಚೆಕ್ ವಿತರಿಸಲಾಯಿತು. ಹೊಸಮನೆ ತಾಂಡದಲ್ಲಿರುವ ಪಾಪನಾಯ್ಕ ಅವರ ಮನೆಗೆ ತೆರಳಿದ್ದ ಪಾಲಿಕೆ ಮೇಯರ್ ನೇತೃತ್ವದ ನಿಯೋಗ, ಚೆಕ್ ವಿತರಿಸಿ, ಸಾಂತ್ವನ ಹೇಳಿತು.

ಕೆಲವೇ ದಿನದಲ್ಲಿ ಕೆಲಸದ ಭರವಸೆ

ಪಾಪನಾಯ್ಕ ಅವರು ಮೃತಪಟ್ಟ ಬಳಿಕ ಅವರ ಪತ್ನಿಗೆ ಮೂರು ಲಕ್ಷ ಪರಿಹಾರ ಮತ್ತು ಉದ್ಯೋಗ ಕೊಡುವ ಭರವಸೆ ನೀಡಲಾಗಿತ್ತು. ಅದರಂತೆ ಈಗ ಚೆಕ್ ವಿತರಿಸಲಾಗಿದೆ. ಕೆಲವೇ ದಿನದಲ್ಲಿ ಕೆಲಸ ಕೊಡುವ ಭರವಸೆಯನ್ನು ನೀಡಲಾಗಿದೆ.

ಯಾರಿದು ಪಾಪನಾಯ್ಕ?

ಪಾಪನಾಯ್ಕ ಅವರು ಮಹಾನಗರ ಪಾಲಿಕೆ ಅನಿಲ ಚಿತಾಗಾರದಲ್ಲಿ ಕೆಲಸ ಮಾಡುತ್ತಿದ್ದರು. ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ನೂರಾರು ಮಂದಿಯ ದೇಹಗಳ ದಹನ ಮಾಡಿದ್ದರು. ಈ ವೇಳೆ ಸೋಂಕು ತಗುಲಿ ಪಾಪನಾಯ್ಕ ಅವರು ಮೃತರಾಗಿದ್ದರು. ಈ ಮೊದಲು ಪಾಪನಾಯ್ಕ ಅವರ ಮಕ್ಕಳಿಬ್ಬರು ವಿವಿಧ ಖಾಯಿಲೆಗಳಿಂದ ಮೃತರಾಗಿದ್ದರು. ಹಾಗಾಗಿ ಪತ್ನಿ ಸವಿತಾ ಈಗ ಅನಾಥವಾಗಿದ್ದಾರೆ.

311020 Papa Naik Corona Death News 1 1

ಕರೋನ ವಾರಿಯರ್ ಎಂದು ಘೋಷಿಸಿ

ಪಾಪನಾಯ್ಕ ಅವರು ಗುತ್ತಿಗೆ ಆಧಾರದ ನೌಕರನಾಗಿದ್ದರಿಂದ ಅವರನ್ನು ಕರೋನ ವಾರಿಯರ್ ಎಂದು ಘೋಷಿಸಲು ಸಾದ್ಯವಿಲ್ಲ ಎಂದು ಸರ್ಕಾರ ತಿಳಿಸಿದೆ. ಒಂದು ವೇಳೆ ಪಾಪನಾಯ್ಕ ಅವರು ಖಾಯಂ ನೌಕರನಾಗಿದ್ದರೆ 30 ಲಕ್ಷ ರೂ. ಪರಿಹಾರ ಸಿಗುತ್ತಿತ್ತು. ಸರ್ಕಾರ ಪಾಪನಾಯ್ಕ ಅವರನ್ನು ಕರೋನ ವಾರಿಯರ್ ಎಂದು ಘೋಷಿಸಿ, ಉಳಿದ ಕರೋನ ವಾರಿಯರ್‍ಗಳಂತೆ 30 ಲಕ್ಷ ರೂ. ಪರಿಹಾರ ವಿತರಿಸಬೇಕು ಎಂದು ಶಿವಮೊಗ್ಗ ಲೈವ್.ಕಾಂ ಇತ್ತೀಚೆಗಷ್ಟೆ ವರದಿ ಪ್ರಕಟಿಸಿತ್ತು. ಇದಕ್ಕೆ ಸಾರ್ವಜನಿಕರು, ವಿವಿಧ ಸಂಘಟನೆಗಳು ಕೂಡ ಪೂರಕವಾಗಿ ಸ್ಪಂದಿಸಿವೆ.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 7, 2020

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

Leave a Comment