ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ |SHIMOGA NEWS | 18 NOVEMBER 2020
ಕರೋನ ಲಾಕ್ಡೌನ್ನಿಂದಾಗಿ ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕಿದ್ದ ಸರ್ಕಾರ, ವಿದ್ಯುತ್ ದರ ಹೆಚ್ಚಳ ಮಾಡಿ ಬರೆ ಹಾಕಿದೆ. ಈ ನಿರ್ಧಾರವನ್ನು ಕೂಡಲೆ ಹಿಂಪಡೆಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸಿಗರು, ರಾಜ್ಯ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿದರು.
ಪ್ರತಿ ಯುನಿಟ್ಗೆ 40 ಪೈಸೆ ಹೆಚ್ಚಳ
ರಾಜ್ಯ ಸರ್ಕಾರ ವಿದ್ಯುತ್ ದರವನ್ನು ಪ್ರತಿ ಯುನಿಟ್ಗೆ 40 ಪೈಸೆ ಹೆಚ್ಚಳ ಮಾಡಿದೆ. ಸಂಕಷ್ಟದಲ್ಲಿರುವ ಜನರಿಗೆ ಇದು ಮತ್ತಷ್ಟು ಸಮಸ್ಯೆ ಉಂಟು ಮಾಡಿದೆ. ನವೆಂಬರ್ 1ರಿಂದಲೇ ನೂತನ ದರ ಜಾರಿಗೆ ಬಂದಿದೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ, ವಿದ್ಯುತ್ ದರ ಏರಿಕೆ ಮಾಡಿರಲಿಲ್ಲ ಎಂದರು.
ಕಾಂಗ್ರೆಸ್ ಪ್ರತಿಭಟನೆಯ ವಿಡಿಯೋ ರಿಪೋರ್ಟ್
ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೇಶ್, ಕಾರ್ಪೊರೇಟರ್ ರಮೇಶ್ ಹೆಗ್ಡೆ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

- ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ, ಇಲ್ಲಿದೆ ಡಿಟೇಲ್ಸ್

- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

- ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್ ವಾಪಸ್

About The Editor
ನಿತಿನ್ ಆರ್.ಕೈದೊಟ್ಲು





