ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ |SHIMOGA NEWS | 25 NOVEMBER 2020
ಹಸಿ ಮತ್ತು ಒಣ ಕಸ ವಿಂಗಡಣೆಯನ್ನು ಕಡ್ಡಾಯಗೊಳಿಸಿ ಶಿವಮೊಗ್ಗ ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ. ಇನ್ಮುಂದೆ ಕಸ ವಿಂಗಡಣೆ ಮಾಡದೆ ಕಸ ಸಂಗ್ರಹಿಸುವ ಗಾಡಿಗೆ ನೀಡಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಾಲಿಕೆ ಕಮಿಷನರ್ ಎಚ್ಚರಿಸಿದ್ದಾರೆ.
ಎರಡು ದಿನ ಮಾತ್ರ ಒಣ ಕಸ ಸಂಗ್ರಹ
ಹಸಿ ಕಸವನ್ನು ವಾರದ ಎಲ್ಲ ದಿನವು ಸಂಗ್ರಹಿಸಲಾಗುತ್ತದೆ. ವಾರದ ಎರಡು ದಿನ ಮಾತ್ರ ಒಣ ಕಸ ಸಂಗ್ರಹಿಸಲು ನಿರ್ಧರಿಸಲಾಗಿದೆ. ಭಾನುವಾರ ಮತ್ತು ಬುಧವಾರ ಮಾತ್ರ ಒಣ ಕಸ ಸಂಗ್ರಹಿಸಲಾಗುತ್ತದೆ ಎಂದು ಪಾಲಿಕೆ ತಿಳಿಸಿದೆ.
ಯಾವುದು ಒಣ ಕಸ?
ಪೇಪರ್, ಪ್ಲಾಸ್ಟಿಕ್, ಗ್ಲಾಸ್ ಚೂರುಗಳು, ಇತರೆ ಕಚ್ಛಾ ವಸ್ತುಗಳು ಒಣ ಕೆಸ ಆಗಿದ್ದು, ಅದನ್ನು ವಿಂಗಡಿಸಬೇಕಿದೆ. ಕೊಳತೆ ಹಣ್ಣು, ತರಕಾರಿ, ಅಡುಗೆ ಮನೆ ತ್ಯಾಜ್ಯ ಹಸಿ ಕಸ. ಇವುಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ ಕಸ ಸಂಗ್ರಹಕ್ಕೆ ಬರುವ ವಾಹನಗಳಿಗೆ ನೀಡಬೇಕು. ಇನ್ನು, ಬಯೋ ಮೆಡಿಕಲ್ ತ್ಯಾಜ್ಯಗಳಾದ ಮಾಸ್ಕ್, ಗ್ಲೌಸ್‌ಗಳನ್ನು ಪ್ರತ್ಯೇಕವಾಗಿ ವಿಂಗಡಿಸಬೇಕು ಎಂದು ತಿಳಿಸಲಾಗಿದೆ
ಒಂದು ವೇಳೆ ಕಸ ವಿಂಗಡಣೆ ಮಾಡದೆ ಇದ್ದರೆ ಅಂತವರ ವಿರುದ್ಧ ಕಾರ್ಪೊರೇಟಷನ್ ಆಕ್ಟ್ ಮತ್ತು ಘನತ್ಯಾಜ್ಯ ನಿರ್ವಹಣೆ ಅಧಿನಿಯಮದಂತೆ ದಂಡ ವಿಧಿಸಲಾಗುತ್ತದೆ ಎಂದು ಆಯುಕ್ತ ಚಿದಾನಂದ ವಟಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






