ಶಿವಮೊಗ್ಗ ಲೈವ್.ಕಾಂ |SHIMOGA NEWS | 27 NOVEMBER 2020
ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ನವೆಂಬರ್ 29ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವೀರಭದ್ರಪ್ಪ ತಿಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರೊ.ವೀರಭದ್ರಪ್ಪ, ಸಹ್ಯಾದ್ರಿ ವಿಜ್ಞಾನ ಕಾಲೇಜಿನ ವಿಸ್ತರಣಾ ಕಟ್ಟಡ, ಕಲಾ ಕಾಲೇಜಿನ ಪ್ರವೇಶ ದ್ವಾರ ಮತ್ತು ಬಾಯ್ಸ್ ಹಾಸ್ಟೆಲ್ ವಿಸ್ತರಣಾ ಕಟ್ಟಡವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉದ್ಘಾಟಿಸಲಿದ್ದಾರೆ ಎಂದರು.
ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಆ ದಿನ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ ಉಪ ಸಭಾಪತಿ ಧರ್ಮೇಗೌಡ, ಸಂಸದ ಬಿ.ವೈ.ರಾಘವೇಂದ್ರ, ರಾಜ್ಯ ಉನ್ನತ ಶಿಕ್ಷಣ ಪರಿಷತ್ ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ.ಗೋಪಾಲಕೃಷ್ಣ ಜೋಶಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.
VIDEO REPORT
ಕುಲಸಚಿವ ಪ್ರೊ.ಎಸ್.ಎಸ್.ಪಾಟೀಲ್, ಸಹ್ಯಾದ್ರಿ ವಿಜ್ಞಾನ ಕಾಲೇಜು ಪ್ರಾಂಶುಪಾಲರಾದ ಡಾ.ಕೆ.ಆರ್.ಶಶಿರೇಖಾ, ವಾಣಿಜ್ಯ ಮತ್ತು ನಿರ್ವಹಣೆ ಕಾಲೇಜಿನ ಪ್ರಿನ್ಸಿಪಾಲ್ ಡಾ.ಹೆಚ್.ಎಂ.ವಾಗ್ದೇವಿ, ಕಲಾ ಕಾಲೇಜು ಪ್ರಾಚಾರ್ಯರಾದ ಡಾ.ಕೆ.ಬಿ.ಧನಂಜಯ, ಸಿಂಡಿಕೇಟ್ ಸದಸ್ಯರಾದ ಬಳ್ಳೆಕೆರೆ ಸಂತೋಷ್, ಕಿರಣ್ ದೇಸಾಯಿ, ರಾಮೇಶ್ ಬಾಬು ಸೇರಿದಂತೆ ಪ್ರಮುಖರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]