ಶಿವಮೊಗ್ಗ ಲೈವ್.ಕಾಂ |SHIMOGA NEWS | 30 NOVEMBER 2020
ಕುವೆಂಪು ವಿಶ್ವವಿದ್ಯಾಲಯದ ಅಪೂರ್ಣ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸರ್ಕಾರದಿಂದ ಒಂದು ಕೋಟಿ ರೂ. ಬಿಡುಗಡೆ ಮಾಡಲಾಗುತ್ತದೆ. ಉಳಿದ ಕಾಮಗಾರಿಗಳಿಗೆ ಬಜೆಟ್ನಲ್ಲಿ ಅನುದಾನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.
ಸಹ್ಯಾದ್ರಿ ಕಾಲೇಜು ಆವರಣದಲ್ಲಿ ವಿಜ್ಞಾನ ಕಾಲೇಜು ವಿಸ್ತರಣಾ ಕಟ್ಟಡ, ಕಲಾ ಕಾಲೇಜು ಪ್ರವೇಶದ್ವಾರ, ವಿದ್ಯಾರ್ಥಿ ಹಾಸ್ಟೆಲ್ ವಿಸ್ತರಣಾ ಕಟ್ಟಡಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಯಡಿಯೂರಪ್ಪ, ಮಲೆನಾಡಿನ ಅತ್ಯುನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ. ನಾಡಿಗೆ ಹಲವರನ್ನು ಕೊಡುಗೆಯಾಗಿ ನೀಡಿದೆ ಎಂದರು.
ನಾನು ಈ ಕಾಲೇಜು ವಿದ್ಯಾರ್ಥಿ
ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ನಾನು ಈ ಕಾಲೇಜು ಹಳೆ ವಿದ್ಯಾರ್ಥಿ. ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಶಿಕ್ಷಣ ಕಾಶಿಯಲ್ಲಿ ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚುಟುವಟಿಕೆಗಳಿಗೂ ಆದ್ಯತೆ ನೀಡಲಾಗುತ್ತಿದೆ. ವಿಜ್ಞಾನ ಲ್ಯಾಬ್ಗೆ ಕೇಂದ್ರ ಸರ್ಕಾರದಿಂದ ಅನುದಾನ ಸಿಗಲಿದೆ ಎಂದರು.
ಇಲ್ಲಿದೆ ವಿಡಿಯೋ ರಿಪೋರ್ಟ್
ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವೀರಭದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಉಪ ಸಭಾಪತಿ ದರ್ಮೇಗೌಡ, ಎಂಎಲ್ಸಿಗಳಾದ ಆರ್.ಪ್ರಸನ್ನ ಕುಮಾರ್, ಎಸ್.ಎಲ್.ಭೋಜೇಗೌಡ, ಎಸ್.ರುದ್ರೇಗೌಡ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ನಿಗಮಗಳ ಅಧ್ಯಕ್ಷರಾದ ಡಿ.ಎಸ್.ಅರುಣ್, ಕೆ.ಎಸ್.ಗುರುಮೂರ್ತಿ, ಪವಿತ್ರಾ ರಾಮಯ್ಯ, ಎಸ್.ಎಸ್.ಜ್ಯೋತಿಪ್ರಕಾಶ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್, ಜಿಲ್ಲಾಧಿಕಾರಿ ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಸಿಇಒ ವೈಶಾಲಿ, ಕುವೆಂಪು ವಿವಿ ಕುಲ ಸಚಿವ ಪ್ರೊ.ಎಸ್.ಎಸ್.ಪಾಟೀಲ್, ಸಿಂಡಿಕೇಟ್ ಸದಸ್ಯರಾದ ಬಳ್ಳೆಕೆರೆ ಸಂತೋಷ್, ಧರ್ಮಪ್ರಸಾದ್, ಸಹ್ಯಾದ್ರಿ ಕಾಲೇಜು ಪ್ರಾಚಾರ್ಯರಾದ ಡಾ.ಧನಂಜಯ, ಡಾ.ವಾಗ್ದೇವಿ, ಡಾ.ಶಶಿರೇಖಾ ಸೇರಿದಂತೆ ಹಲವರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200