ಶಿವಮೊಗ್ಗ ಲೈವ್.ಕಾಂ | SHIMOGA NEWS | 30 NOVEMBER 2020
ಲಾಕ್ ಡೌನ್ ಅವಧಿಯನ್ನು ಸೇವಾವಧಿ ಅಂತಾ ಪರಿಗಣಿಸಿ ಗೌರವಧನ ಬಿಡುಗಡೆ ಮಾಡಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಹ್ಯಾದ್ರಿ ಕಾಲೇಜಿನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾದ ಅತಿಥಿ ಉಪನ್ಯಾಸಕರು ಮನವಿ ಸಲ್ಲಿಸಿದ್ದಾರೆ.
ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ಲಾಕ್ ಡೌನ್ ಅವಧಿಯನ್ನು ವಿಶೇಷ ಪ್ರಕರಣದಲ್ಲಿ ಕರ್ತವ್ಯ ಅವಧಿ ಎಂದು ಪರಿಗಣಿಸಿ ಗೌರವಧನ ನೀಡಲು ಸರ್ಕಾರ ಆದೇಶಿಸಿದೆ. ಅದೆ ರೀತಿ ವಿಶ್ವವಿದ್ಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗು ಗೌರವಧನ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದರು.
ಲಾಕ್ಡೌನ್ ಹಿನ್ನೆಲೆ ಕುವೆಂಪು ವಿಶ್ವವಿದ್ಯಾಲಯವು ಎಂಟು ತಿಂಗಳಿಂದ ಅತಿಥಿ ಉಪನ್ಯಾಸಕರಿಗೆ ವೇತನ ಪಾವತಿ ಮಾಡಿಲ್ಲ. ಸರ್ಕಾರ ಈ ಸಂಬಂಧ ವಿವಿಗಳಿಗೆ ಅದೇಶ ನೀಡಬೇಕು ಎಂದು ಅತಿಥಿ ಉಪನ್ಯಾಸಕರು ಒತ್ತಾಯಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]