ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 6 DECEMBER 2020
ಚಿಕಿತ್ಸೆ ನೆಪದಲ್ಲಿ ವೈದ್ಯರೊಬ್ಬರು ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ, ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ವೈದ್ಯನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಭದ್ರಾವತಿಯ ಓಲ್ಡ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಖಾಜಿ ಮೊಹಲ್ಲಾದ ಮೂಲವ್ಯಾಧಿ ವೈದ್ಯ ಡಾ.ಅನಿಮೇಶ್ ಬಿಸ್ವಾಸ್ ಬಂಧಿತ. ಚಿಕಿತ್ಸೆಗೆ ತೆರಳಿದ್ದ ವೇಳೆ ವೈದ್ಯರು ಬಟ್ಟೆ ಬಿಚ್ಚುವಂತೆ ಹೇಳಿ, ತಾವೆ ಬಟ್ಟೆಯನ್ನು ಎಳೆದು ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ವೇಳೆ ವೈದ್ಯರು ಪಾನಮತ್ತರಾಗಿದ್ದದ್ದು ತಿಳಿಯಿತು ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಡಾ.ಅನಿಮೇಶ್ ಬಿಸ್ವಾಸ್ ಅವರು ಮತ್ತೊಬ್ಬ ಮಹಿಳೆಗೆ ಇದೆ ರೀತಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಎಫ್ಐಆರ್ನಲ್ಲಿ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 354, 354ಎ(1), 354(ಬಿ), 509 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ವೈದ್ಯನನ್ನು ಬಂಧಿಸಲಾಗಿದೆ. ಓಲ್ಡ್ ಟೌನ್ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






